AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ

‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ

ಮದನ್​ ಕುಮಾರ್​
|

Updated on:May 27, 2026 | 9:13 PM

Share

‘ಸಿಟಿ ಲೈಟ್ಸ್’ ಚಿತ್ರತಂಡದಿಂದ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಸೆಟ್​ನಲ್ಲಿ ದುನಿಯಾ ವಿಜಯ್ ಅವರ ನಿರ್ದೇಶನ ಯಾವ ರೀತಿ ಇರುತ್ತದೆ ಎಂಬುದರ ಝಲಕ್ ಇದರಲ್ಲಿ ಕಾಣಿಸುತ್ತದೆ. ಈ ಚಿತ್ರದ ಮೂಲಕ ವಿಜಯ್ ಪುತ್ರಿ ಮೋನಿಷಾ ಅವರು ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ವಿನಯ್ ರಾಜ್​ಕುಮಾರ್ ಅವರು ಮುಖ್ಯ ಭೂಮಿಕೆಯಲ್ಲಿದ್ದಾರೆ.

ದುನಿಯಾ ವಿಜಯ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 3ನೇ ಸಿನಿಮಾ ‘ಸಿಟಿ ಲೈಟ್ಸ್’ (City Lights) ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ‘ಸಲಗ’, ‘ಭೀಮ’ ಬಳಿಕ ವಿಜಯ್ ಕುಮಾರ್ ಅವರು ಆ್ಯಕ್ಷನ್-ಕಟ್ ಹೇಳಿರುವ ಸಿನಿಮಾ ಇದು. ಈ ಸಿನಿಮಾದಿಂದ ಇತ್ತೀಚೆಗೆ ‘ಬಾವ ಬಾವ’ ಹಾಡನ್ನು ಬಿಡುಗಡೆ ಮಾಡಲಾಗಿತ್ತು. ಆ ಮೂಲಕ ‘ಸಿಟಿ ಲೈಟ್ಸ್‌’ ಸಿನಿಮಾದ ಪ್ರಚಾರಕ್ಕೆ ಚುರುಕು ಮುಟ್ಟಿಸಲಾಯಿತು. ಈ ಚಿತ್ರದ ಮೂಲಕ ಪುತ್ರಿ ಮೋನಿಷಾ ವಿಜಯ್‌ ಕುಮಾ‌ರ್ (Monisha Vijay Kumar) ಅವರನ್ನು ಚಿತ್ರರಂಗಕ್ಕೆ ಪರಿಚಯಿಸಲಾಗುತ್ತಿದೆ. ಅವರ ಜೊತೆ ವಿನಯ್ ರಾಜ್​ಕುಮಾರ್ ಅವರು ನಟಿಸುತ್ತಿದ್ದಾರೆ. ಹಳ್ಳಿಯಿಂದ ಬೆಂಗಳೂರಿಗೆ ಬಂದ ಇಬ್ಬರು ಏನೆಲ್ಲ ಕಷ್ಟಗಳನ್ನು ಎದುರಿಸುತ್ತಾರೆ ಎನ್ನುವ ಕಥೆ ಈ ಸಿನಿಮಾದಲ್ಲಿ ಇರಲಿದೆ. ಈ ಸಿನಿಮಾಗೆ ಶಿವಸೇನಾ ಅವರ ಛಾಯಾಗ್ರಹಣ ಇದೆ. ದೀಪು ಎಸ್. ಕುಮಾರ್ ಅವರು ಸಂಕಲನ ಮಾಡುತ್ತಿದ್ದಾರೆ. ಮಾಸ್ತಿ ಅವರು ಸಂಭಾಷಣೆ ಬರೆದಿದ್ದಾರೆ. ಚರಣ್ ರಾಜ್ ಅವರು ಸಂಗೀತ ನೀಡಿದ್ದಾರೆ. ಚಿತ್ರತಂಡದಿಂದ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಸೆಟ್​ನಲ್ಲಿ ದುನಿಯಾ ವಿಜಯ್ (Duniya Vijay) ಅವರ ನಿರ್ದೇಶನ ಯಾವ ರೀತಿ ಇರುತ್ತದೆ ಎಂಬುದರ ಝಲಕ್ ಈ ವಿಡಿಯೋದಲ್ಲಿ ಕಾಣಿಸುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: May 27, 2026 09:12 PM
Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More