‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ
‘ಸಿಟಿ ಲೈಟ್ಸ್’ ಚಿತ್ರತಂಡದಿಂದ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಸೆಟ್ನಲ್ಲಿ ದುನಿಯಾ ವಿಜಯ್ ಅವರ ನಿರ್ದೇಶನ ಯಾವ ರೀತಿ ಇರುತ್ತದೆ ಎಂಬುದರ ಝಲಕ್ ಇದರಲ್ಲಿ ಕಾಣಿಸುತ್ತದೆ. ಈ ಚಿತ್ರದ ಮೂಲಕ ವಿಜಯ್ ಪುತ್ರಿ ಮೋನಿಷಾ ಅವರು ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ವಿನಯ್ ರಾಜ್ಕುಮಾರ್ ಅವರು ಮುಖ್ಯ ಭೂಮಿಕೆಯಲ್ಲಿದ್ದಾರೆ.
ದುನಿಯಾ ವಿಜಯ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 3ನೇ ಸಿನಿಮಾ ‘ಸಿಟಿ ಲೈಟ್ಸ್’ (City Lights) ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ‘ಸಲಗ’, ‘ಭೀಮ’ ಬಳಿಕ ವಿಜಯ್ ಕುಮಾರ್ ಅವರು ಆ್ಯಕ್ಷನ್-ಕಟ್ ಹೇಳಿರುವ ಸಿನಿಮಾ ಇದು. ಈ ಸಿನಿಮಾದಿಂದ ಇತ್ತೀಚೆಗೆ ‘ಬಾವ ಬಾವ’ ಹಾಡನ್ನು ಬಿಡುಗಡೆ ಮಾಡಲಾಗಿತ್ತು. ಆ ಮೂಲಕ ‘ಸಿಟಿ ಲೈಟ್ಸ್’ ಸಿನಿಮಾದ ಪ್ರಚಾರಕ್ಕೆ ಚುರುಕು ಮುಟ್ಟಿಸಲಾಯಿತು. ಈ ಚಿತ್ರದ ಮೂಲಕ ಪುತ್ರಿ ಮೋನಿಷಾ ವಿಜಯ್ ಕುಮಾರ್ (Monisha Vijay Kumar) ಅವರನ್ನು ಚಿತ್ರರಂಗಕ್ಕೆ ಪರಿಚಯಿಸಲಾಗುತ್ತಿದೆ. ಅವರ ಜೊತೆ ವಿನಯ್ ರಾಜ್ಕುಮಾರ್ ಅವರು ನಟಿಸುತ್ತಿದ್ದಾರೆ. ಹಳ್ಳಿಯಿಂದ ಬೆಂಗಳೂರಿಗೆ ಬಂದ ಇಬ್ಬರು ಏನೆಲ್ಲ ಕಷ್ಟಗಳನ್ನು ಎದುರಿಸುತ್ತಾರೆ ಎನ್ನುವ ಕಥೆ ಈ ಸಿನಿಮಾದಲ್ಲಿ ಇರಲಿದೆ. ಈ ಸಿನಿಮಾಗೆ ಶಿವಸೇನಾ ಅವರ ಛಾಯಾಗ್ರಹಣ ಇದೆ. ದೀಪು ಎಸ್. ಕುಮಾರ್ ಅವರು ಸಂಕಲನ ಮಾಡುತ್ತಿದ್ದಾರೆ. ಮಾಸ್ತಿ ಅವರು ಸಂಭಾಷಣೆ ಬರೆದಿದ್ದಾರೆ. ಚರಣ್ ರಾಜ್ ಅವರು ಸಂಗೀತ ನೀಡಿದ್ದಾರೆ. ಚಿತ್ರತಂಡದಿಂದ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಸೆಟ್ನಲ್ಲಿ ದುನಿಯಾ ವಿಜಯ್ (Duniya Vijay) ಅವರ ನಿರ್ದೇಶನ ಯಾವ ರೀತಿ ಇರುತ್ತದೆ ಎಂಬುದರ ಝಲಕ್ ಈ ವಿಡಿಯೋದಲ್ಲಿ ಕಾಣಿಸುತ್ತದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.