ವಿನಯ್ ರಾಜ್​ಕುಮಾರ್​ಗೆ ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್

Edited By:

Updated on: Sep 21, 2026 | 7:19 PM

ದುನಿಯಾ ವಿಜಯ್ ನಿರ್ದೇಶನದ ‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಮೆಜೆಸ್ಟಿಕ್ ಏರಿಯಾದ ಕರಾಳ ಕಥೆಯನ್ನು ತೋರಿಸಲಾಗಿದೆ. ಈ ಚಿತ್ರದ ಮೂಲಕ ನಟ ವಿನಯ್ ರಾಜ್​ಕುಮಾರ್ ಅವರಿಗೆ ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಲಾಗಿದೆ. ಆ ಬಗ್ಗೆ ದುನಿಯಾ ವಿಜಯ್ ಅವರು ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

ದುನಿಯಾ ವಿಜಯ್ ನಿರ್ದೇಶನದ ‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಮೆಜೆಸ್ಟಿಕ್ ಏರಿಯಾದ ಕರಾಳ ಕಥೆಯನ್ನು ತೋರಿಸಲಾಗಿದೆ. ಈ ಚಿತ್ರದಲ್ಲಿ ವಿನಯ್ ರಾಜ್​ಕುಮಾರ್, ಮೋನಿಷಾ ವಿಜಯ್ ಕುಮಾರ್ ಅವರು ಅಭಿನಯಿಸಿದ್ದಾರೆ. ವಿನಯ್ ಅವರು ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಮೂಲಕ ಅವರಿಗೆ ಸ್ಯಾಂಡಲ್​ವುಡ್ ಮಯೂರ ಎಂದು ಬಿರುದು ನೀಡಲಾಗಿದೆ. ಆ ಬಗ್ಗೆ ದುನಿಯಾ ವಿಜಯ್ ಅವರು ಮಾತನಾಡಿದ್ದಾರೆ. ‘ಕಷ್ಟದ ವಿರುದ್ಧ ಹೋರಾಡುವ ದಿಟ್ಟತನ ಈ ಪಾತ್ರದಲ್ಲಿದೆ. ಬೇರೆಯವರ ಮನೆಯ ಹೆಣ್ಮಕ್ಕಳ ಪರವಾಗಿ ಹೀರೋ ನಿಂತು ಹೋರಾಡುತ್ತಾನೆ. ಅಣ್ಣಾವ್ರು ಕೂಡ ಜನರ ಪರವಾಗಿ ನಿಂತು ಹೋರಾಡಿದವರು. ಈ ಚಿತ್ರದ ಕಥೆಯಲ್ಲಿ ಮಯೂರನ ರೀತಿ ನಿಂತುಕೊಳ್ಳುವ ವಿನಯ್ ಅವರಿಗೆ ಸ್ಯಾಂಡಲ್​ವುಡ್ ಮಯೂರ ಎಂಬ ಹೆಸರು ಇಟ್ಟಿದ್ದೇನೆ’ ಎಂದು ದುನಿಯಾ ವಿಜಯ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More