ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ದುನಿಯಾ ವಿಜಯ್

Updated on: Mar 07, 2026 | 1:20 PM

ದುನಿಯಾ ವಿಜಯ್ ಅವರು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಏರಿದ್ದಾರೆ. ಈ ವೇದಿಕೆ ಮೇಲೆ ಶಿವರಾಜ್​​ಕುಮಾರ್ ಅವರನ್ನು ನೆನಪಿಸಿಕೊಂಡಿದ್ದಾರೆ. ಅವರು ಶಿವಣ್ಣನಿಗೆ ಧನ್ಯವಾದ ಅರ್ಪಿಸಿದ್ದಾರೆ. ನಟನೆಯನ್ನು ಗುರುತಿಸುವ ಕೆಲಸವನ್ನು ಅವರು ಮಾಡಿದರು ಎಂದು ದುನಿಯಾ ವಿಜಯ್ ಅವರು ಹೇಳಿಕೆ ನೀಡಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ.

ದುನಿಯಾ ವಿಜಯ್ ಅವರು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಈ ವೇದಿಕೆಯಲ್ಲಿ ಶಿವಣ್ಣ ಅವರು ಜಡ್ಜ್​ ಸ್ಥಾನದಲ್ಲಿ ಇದ್ದಾರೆ. ಶಿವಣ್ಣ ಅವರು ಮಾಡಿದ ಸಹಾಯವನ್ನು ದುನಿಯಾ ವಿಜಯ್ ನೆನಪಿಸಿಕೊಂಡರು. ‘ನಾನು ಸಿನಿಮಾ ರಂಗದಲ್ಲಿ ಇನ್ನೂ ಗುರುತಿಸಿಕೊಳ್ಳದೆ ಇರುವಾಗ ಶಿವಣ್ಣ ನನ್ನನ್ನು ಗುರುತಿಸಿ ಅವಕಾಶ ಕೊಟ್ಟರು. ತಂದೆ ತಾಯಿ ಹಾಗೂ ಶಿವಣ್ಣ ಅವರು ಮಾಡಿದ ಆಶೀರ್ವಾದದಿಂದ ಇಲ್ಲಿದ್ದೇನೆ’ ಎಂದು ದುನಿಯಾ ವಿಜಯ್ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More