ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?

Updated on: Sep 04, 2026 | 8:02 PM

‘ವೈಯಕ್ತಿಕ ಜೀವನದ ಬಗ್ಗೆ ನಿನ್ನೆ ಪೋಸ್ಟ್ ಹಾಕಿದ್ದೇನೆ. ಅದನ್ನು ಅಲ್ಲಿಗೆ ಮುಗಿಸಿದ್ದೇನೆ. ತಾವೆಲ್ಲರೂ ಸಹಾಯ ಮಾಡುತ್ತಿದ್ದೀರಿ. ಅದಕ್ಕೆ ಸಂತೋಷ. ತುಂಬಾ ಮುಂದೆ ಬಂದಿದ್ದೇವೆ. ಮಿಕ್ಕಿದ್ದು ಏನಾದರೂ ಮಾತಾಡೋಣ’ ಎಂದು ದುನಿಯಾ ವಿಜಯ್ ಅವರು ಹೇಳಿದ್ದಾರೆ. ಅವರು ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ..

ನಟ ದುನಿಯಾ ವಿಜಯ್ ಹಾಗೂ ನಾಗರತ್ನ ಅವರ ಸಂಸಾರದಲ್ಲಿ ಬಿರುಕು ಮೂಡಿ ಹಲವು ವರ್ಷಗಳೇ ಕಳೆದಿದ್ದವು. ಅಂತಿಮವಾಗಿ ಅವರಿಬ್ಬರು ವಿಚ್ಛೇದನ ಪಡೆದುಕೊಂಡಿದ್ದಾರೆ. ಡಿವೋರ್ಸ್ ಪಡೆದ ಬಳಿಕ ದುನಿಯಾ ವಿಜಯ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಈ ಬಗ್ಗೆ ತಾವು ಸಾರ್ವಜನಿಕವಾಗಿ ಮಾತನಾಡುವುದಿಲ್ಲ ಎಂದು ಕೂಡ ಹೇಳಿದ್ದಾರೆ. ಇಂದು (ಸೆಪ್ಟೆಂಬರ್ 4) ‘ಸಿಟಿ ಲೈಟ್ಸ್’ ಸಿನಿಮಾದ ಸುದ್ದಿಗೋಷ್ಠಿ ಬಳಿಕ ಮಾಧ್ಯಮಗಳಿಂದ ವಿಚ್ಛೇದನದ ಬಗ್ಗೆ ಪ್ರಶ್ನೆ ಎದುರಾಯಿತು. ಅದಕ್ಕೆ ಅವರು ಉತ್ತರ ನೀಡಲು ನಿರಾಕರಿಸಿದರು. ‘ವೈಯಕ್ತಿಕ ಜೀವನದ ಬಗ್ಗೆ ನಿನ್ನೆ ಪೋಸ್ಟ್ ಹಾಕಿದ್ದೇನೆ. ಅದನ್ನು ಅಲ್ಲಿಗೆ ಮುಗಿಸಿದ್ದೇನೆ. ತಾವೆಲ್ಲರೂ ಸಹಾಯ ಮಾಡುತ್ತಿದ್ದೀರಿ. ಅದಕ್ಕೆ ಸಂತೋಷ. ತುಂಬಾ ಮುಂದೆ ಬಂದಿದ್ದೇವೆ. ಮಿಕ್ಕಿದ್ದು ಏನಾದರೂ ಮಾತಾಡೋಣ. ಈಗ ಯಾವುದೇ ರೀತಿಯಲ್ಲಿ ಕುಟುಂಬದ ವಿಚಾರ ಮಾತನಾಡೋಕೆ ನಾನು ಇಷ್ಟಪಡಲ್ಲ’ ಎಂದು ದುನಿಯಾ ವಿಜಯ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More