ದರ್ಶನ್ ಹೆಸರು ಹೇಳುತ್ತಿದ್ದಂತೆ ಹೇಗಿತ್ತು ನೋಡಿ ದುನಿಯಾ ವಿಜಯ್ ಪ್ರತಿಕ್ರಿಯೆ
ದರ್ಶನ್ ಅವರು ಬಂಧನಕ್ಕೆ ಒಳಗಾಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಅವರನ್ನು ಜೈಲಿನಲ್ಲಿ ಇಡಲಾಗಿದೆ. ಈ ಪ್ರಕರಣದ ಬಳಿಕ ಅನೇಕರು ದರ್ಶನ್ ಪರವಾಗಿ ಮಾತನಾಡಿದರೆ ಇನ್ನೂ ಕೆಲವರು ದರ್ಶನ್ ಅವರ ಕೆಲಸವನ್ನು ವಿರೋಧಿಸಿದ್ದಾರೆ. ಈಗ ದುನಿಯಾ ವಿಜಯ್ ಅವರು ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ದುನಿಯಾ ವಿಜಯ್ ಅವರು ಸದ್ಯ ‘ಭೀಮ’ ಸಿನಿಮಾ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಒಳ್ಳೆಯ ಗಳಿಕೆ ಮಾಡಿ ಸಾಗುತ್ತಿದೆ. ಈ ಚಿತ್ರದಿಂದ ವಿಜಯ್ ಅವರಿಗೆ ನಿರ್ದೇಶನ ಹಾಗೂ ನಟನೆಯಲ್ಲಿ ಮತ್ತೊಂದು ಗೆಲುವು ಸಿಕ್ಕಿದೆ. ಈ ಗೆಲುವಿನ ಖುಷಿಯಲ್ಲಿ ಅವರು ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ. ಈ ವೇಳೆ ಅವರಿಗೆ ಹೀರೋಗಳ ಹೆಸರು ಹೇಳಿ ಅವರ ಬಗ್ಗೆ ಏನು ಅನಿಸುತ್ತದೆ ಎಂದು ಕೇಳಲಾಯಿತು. ಪುನೀತ್ ರಾಜ್ಕುಮಾರ್ ಬಗ್ಗೆ ಕೇಳಲಾಯಿತು. ‘ಕುಟುಂಬದವರನ್ನೇ ಯಾರನ್ನೋ ಕಳೆದುಕೊಂಡಿದ್ದೇನೆ ಎಂಬ ಭಾವನೆ’ ಎಂದರು ದುನಿಯಾ ವಿಜಯ್. ದರ್ಶನ್ ಹೆಸರು ಹೇಳುತ್ತಿದ್ದಂತೆ ‘ಒಳ್ಳೆಯದಾಗಲಿ’ ಎಂದಷ್ಟೇ ಹೇಳಿ ಮಾತನ್ನು ಮುಗಿಸಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos