ದುನಿಯಾ ವಿಜಯ್​ದು ಇಷ್ಟ ಆಗೋ ವ್ಯಕ್ತಿತ್ವ, ಅವರ ಜೊತೆ ಸಿನಿಮಾ ಮಾಡ್ತೀನಿ; ಉಮಾಪತಿ ಶ್ರೀನಿವಾಸ್

Updated on: Feb 11, 2025 | 10:55 AM

ಉಮಾಪತಿ ಶ್ರೀನಿವಾಸ್ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರ ನಿರ್ಮಾಣದ ಸಿನಿಮಾಗಳು ಗಮನ ಸೆಳೆದಿದ್ದು ಇದೆ. ಈಗ ದುನಿಯಾ ವಿಜಯ್ ಅವರು ಹೊಸ ಸಿನಿಮಾ ಒಂದನ್ನು ಮಾಡಲಿದ್ದಾರೆ. ಆ ಬಗ್ಗೆ ಅವರ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಉಮಾಪತಿ ಶ್ರೀನಿವಾಸ್ ಹಾಗೂ ದುನಿಯಾ ವಿಜಯ್ ಒಟ್ಟಾಗಿ ಸಿನಿಮಾ ಮಾಡಲಿದ್ದಾರಂತೆ. ‘ಸಿಟಿ ಲೈಟ್ಸ್’ ಹೆಸರಿನ ಚಿತ್ರವನ್ನು ವಿಜಯ್ ನಿರ್ದೇಶನ ಮಾಡುತ್ತಿದ್ದು ವಿನಯ್ ರಾಜ್​ಕುಮಾರ್ ಇದಕ್ಕೆ ಹೀರೋ. ವಿಜಯ್ ಪುತ್ರಿ ಮೋನಿಷಾ ಚಿತ್ರದ ನಾಯಕಿ. ಈ ಚಿತ್ರದ ಮುಹೂರ್ತಕ್ಕೆ ಉಮಾಪತಿ ಶ್ರೀನಿವಾಸ್ ಅವರು ಆಗಮಿಸಿದ್ದರು. ಅವರು ದುನಿಯಾ ವಿಜಯ್​ನ ಬಾಯ್ತುಂಬ ಹೊಗಳಿದ್ದಾರೆ. ಅವರ ಜೊತೆ ಸಿನಿಮಾ ಮಾಡುವುದಾಗಿಯೂ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More