ಶಿವಣ್ಣನ ‘ಭೈರತಿ ರಣಗಲ್’ ಸಿನಿಮಾ ನೋಡಲು ಬಂದ ದುನಿಯಾ ವಿಜಯ್
Bhairathi Ranagal: ಶಿವರಾಜ್ ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಕಳೆದ ಶುಕ್ರವಾರವಷ್ಟೆ ಬಿಡುಗಡೆ ಆಗಿದೆ. ನಟ ದುನಿಯಾ ವಿಜಯ್ ಅಭಿಮಾನಿಗಳೊಟ್ಟಿಗೆ ಕೂತು ಸಿನಿಮಾ ವೀಕ್ಷಣೆ ಮಾಡಿದ್ದಾರೆ.
ಶಿವರಾಜ್ ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಕಳೆದ ಶುಕ್ರವಾರವಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದು, ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಬಿಡುಗಡೆ ಆದ ದಿನವೇ ಡಾಲಿ ಧನಂಜಯ್, ಶಿವಣ್ಣನ ‘ಮಫ್ತಿ’ ಲುಕ್ನಲ್ಲಿ ಕಪ್ಪು ಬಣ್ಣದ ಶರ್ಟ್, ಪಂಚೆ ಧರಿಸಿ ಬಂದು ಅಭಿಮಾನಿಗಳೊಟ್ಟಿಗೆ ಸಂಭ್ರಮ ಆಚರಿಸುತ್ತಾ ಮೊದಲ ಶೋ ವೀಕ್ಷಿಸಿದ್ದರು. ಇದೀಗ ದುನಿಯಾ ವಿಜಯ್ ಅವರು ಚಿತ್ರಮಂದಿರದಲ್ಲಿ ‘ಭೈರತಿ ರಣಗಲ್’ ಸಿನಿಮಾ ವೀಕ್ಷಿಸಿದ್ದಾರೆ. ದುನಿಯಾ ವಿಜಿ, ಚಿತ್ರಮಂದಿರಕ್ಕೆ ಬಂದಾಗ ಸಿನಿಮಾ ನೋಡಲು ಬಂದವರು ನಟನೊಡನೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಹಿಂದೆ ಶಿವಣ್ಣ ನಟನೆಯ ‘ಟಗರು’ ಸಿನಿಮಾ ಮರು ಬಿಡುಗಡೆ ಆಗಿದ್ದಾಗಲೂ ಸಹ ದುನಿಯಾ ವಿಜಯ್, ತಮ್ಮ ‘ಭೀಮ’ ಸಿನಿಮಾ ತಂಡವನ್ನು ಕರೆದುಕೊಂಡು ಸಿನಿಮಾ ನೋಡಲು ಹೋಗಿದ್ದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ

