ಶಿವಣ್ಣನ ‘ಭೈರತಿ ರಣಗಲ್’ ಸಿನಿಮಾ ನೋಡಲು ಬಂದ ದುನಿಯಾ ವಿಜಯ್

Updated on: Nov 20, 2024 | 6:29 PM

Bhairathi Ranagal: ಶಿವರಾಜ್ ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಕಳೆದ ಶುಕ್ರವಾರವಷ್ಟೆ ಬಿಡುಗಡೆ ಆಗಿದೆ. ನಟ ದುನಿಯಾ ವಿಜಯ್ ಅಭಿಮಾನಿಗಳೊಟ್ಟಿಗೆ ಕೂತು ಸಿನಿಮಾ ವೀಕ್ಷಣೆ ಮಾಡಿದ್ದಾರೆ.

ಶಿವರಾಜ್ ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಕಳೆದ ಶುಕ್ರವಾರವಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದು, ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಬಿಡುಗಡೆ ಆದ ದಿನವೇ ಡಾಲಿ ಧನಂಜಯ್, ಶಿವಣ್ಣನ ‘ಮಫ್ತಿ’ ಲುಕ್​ನಲ್ಲಿ ಕಪ್ಪು ಬಣ್ಣದ ಶರ್ಟ್, ಪಂಚೆ ಧರಿಸಿ ಬಂದು ಅಭಿಮಾನಿಗಳೊಟ್ಟಿಗೆ ಸಂಭ್ರಮ ಆಚರಿಸುತ್ತಾ ಮೊದಲ ಶೋ ವೀಕ್ಷಿಸಿದ್ದರು. ಇದೀಗ ದುನಿಯಾ ವಿಜಯ್ ಅವರು ಚಿತ್ರಮಂದಿರದಲ್ಲಿ ‘ಭೈರತಿ ರಣಗಲ್’ ಸಿನಿಮಾ ವೀಕ್ಷಿಸಿದ್ದಾರೆ. ದುನಿಯಾ ವಿಜಿ, ಚಿತ್ರಮಂದಿರಕ್ಕೆ ಬಂದಾಗ ಸಿನಿಮಾ ನೋಡಲು ಬಂದವರು ನಟನೊಡನೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಹಿಂದೆ ಶಿವಣ್ಣ ನಟನೆಯ ‘ಟಗರು’ ಸಿನಿಮಾ ಮರು ಬಿಡುಗಡೆ ಆಗಿದ್ದಾಗಲೂ ಸಹ ದುನಿಯಾ ವಿಜಯ್, ತಮ್ಮ ‘ಭೀಮ’ ಸಿನಿಮಾ ತಂಡವನ್ನು ಕರೆದುಕೊಂಡು ಸಿನಿಮಾ ನೋಡಲು ಹೋಗಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More