ಸಭೆಯಲ್ಲಿ ಪ್ರಮುಖವಾಗಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಳ ಮೇಲೆ ಚರ್ಚೆ ನಡೆಯಿತು: ಬಿವೈ ವಿಜಯೇಂದ್ರ
ಪಕ್ಷವೆಂದ ಮೇಲೆ ನಾಯಕರ ನಡುವೆ ಒಂದಷ್ಟು ಸಣ್ಣಪುಟ್ಟ ವ್ಯತ್ಯಾಸ, ಮತಾಭಿಪ್ರಾಯಗಳು ಇದ್ದೇ ಇರುತ್ತವೆ, ಎಲ್ಲ ಬೆಳವಣಿಗೆಗಳನ್ನು ದೆಹಲಿ ವರಿಷ್ಠರು ಗಮನಿಸುತ್ತಿದ್ದಾರೆ, ಪ್ರತಿಯೊಂದು ಅಂಶವನ್ನು ನಾವು ಸರಿದೂಗಿಸಿಕೊಂಡು ಹೋಗಬೇಕಿದೆ ಎಂದು ಸಭೆಯಲ್ಲಿ ಪಕ್ಷದ ಸಂಸದೀಯ ಮಂಡಳಿ ಸದಸ್ಯರಾಗಿರುವ ಬಿಎಸ್ ಯಡಿಯೂರಪ್ಪ ಹೇಳಿದರೆಂದು ವಿಜಯೇಂದ್ರ ತಿಳಿಸಿದರು.
ಬೆಂಗಳೂರು: ಲೋಕಸಭೆ, ವಿಧಾನಸಭಾ ಚುನಾವಣೆಗಳಲ್ಲಿ ಸೋತವರು, ಮಾಜಿ ಶಾಸಕರ ಜೊತೆ ಲಂಚ್ಆನ್ ಸಭೆಯೊಂದನ್ನು ನಡೆಸಿದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಇಂಥದೊಂದು ಸಭೆಯನ್ನು ತಾನು 7-8 ತಿಂಗಳ ಹಿಂದೆಯೇ ಮಾಡಬೇಕಿತ್ತು, ಆದರೆ ಕೆಲಸದ ಒತ್ತಡದಿಂದ ಸಾಧ್ಯವಾಗಿರಲಿಲ್ಲ, ಪಕ್ಷದ ಸಂಘಟನೆ ಮತ್ತು ಬಲವರ್ಧನೆ ಕುರಿತು ಚರ್ಚಿಸುವುದು ಸಭೆಯ ಮುಖ್ಯ ಉದ್ದೇಶವಾಗಿತ್ತು, ಸಮಾಜದ ಎಲ್ಲ ವರ್ಗಗಳ ಜೊತೆ ಮಾತಾಡಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿದೆ, ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ಪಂಚಾಯತ್ ಚುನಾವಣೆಗಳಿಗಾಗಿ ರೂಪುರೇಷೆಗಳನ್ನು ಸಿದ್ಧಪಡಿಸುವುದು-ಮೊದಲಾದ ವಿಷಯಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು ಎಂದು ವಿಜಯೇಂದ್ರ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ವಕ್ಫ್ ವಿರುದ್ಧ 3ನೇ ಹಂತದ ಹೋರಾಟಕ್ಕೆ ಯತ್ನಾಳ್ ಬಣ ಸಜ್ಜು: ಪರಾಜಿತ ಅಭ್ಯರ್ಥಿಗಳೊಂದಿಗೆ ನಾಳೆ ವಿಜಯೇಂದ್ರ ಸಭೆ