Karnataka Assembly Polls 2023; ಬಜರಂಗದಳ ರಾಷ್ಟ್ರಮಟ್ಟದಲ್ಲಿ ಹಿಂದೂಗಳ ಹಿತಾಸಕ್ತಿ ಕಾಯುವ ಒಂದು ಸಂಘಟನೆಯಾಗಿದೆ: ಬಿವೈ ವಿಜಯೇಂದ್ರ

|

Updated on: May 05, 2023 | 6:36 PM

ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ 30 ಜನ ಹಿಂದೂ ಕಾರ್ಯಕರ್ತರ ಹತ್ಯೆಯಾಗಿತ್ತು ಎಂದು ವಿಜಯೇಂದ್ರ ಹೇಳಿದರು.

ಹಾಸನ: ಜಿಲ್ಲೆಯ ಅರಸೀಕೆರೆಯಲ್ಲಿ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರು ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡುವಾಗ ಮಾಧ್ಯಮ ಪ್ರತಿನಿಧಿಗಳೊಂದಿಗೂ ಮಾತಾಡಿದರು. ಕಾಂಗ್ರೆಸ್ ಪಕ್ಷ ನಾಯಕರ ಮೇಲೆ ನೇರ ಪ್ರಹಾರ ನಡೆಸಿದ ಅವರು ಪ್ರಧಾನಿ ನರೇಂದ್ರ ಮೋದಿ (PM Narendra Modi) ಬಗ್ಗೆ ಇಲ್ಲಸಲ್ಲದ ಮಾತುಗಳನ್ನಾಡುತ್ತಿರುವ ಆ ಪಕ್ಷದ ನಾಯಕರು ಬಜರಂಗ ದಳವನ್ನು (Bajrang Dal) ನಿಷೇಧಿಸುವುದಾಗಿ ಹೇಳುತ್ತಿದ್ದಾರೆ. ಹಾಗಾದರೆ ಪಿಎಫ್ ಐ ಮತ್ತು ಬಜರಂಗದಳದ ನಡುವೆ ಏನೂ ವ್ಯತ್ಯಾಸವಿಲ್ಲವೇ? ಎಂದು ಅವರು ಪ್ರಶ್ನಿಸಿದರು. ಬಜರಂಗ ದಳ ರಾಷ್ಟ್ರಮಟ್ಟದಲ್ಲಿ ಹಿಂದೂಗಳ ಹಿತಾಸಕ್ತಿಯನ್ನು ಕಾಯುವ ಸಂಘಟನೆಯಾಗಿದೆ, ಒಂದು ಶಕ್ತಿಯಾಗಿದೆ ಎಂದು ಹೇಳಿದ ವಿಜಯೇಂದ್ರ ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ 30 ಜನ ಹಿಂದೂ ಕಾರ್ಯಕರ್ತರ ಹತ್ಯೆಯಾಗಿತ್ತು ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ