ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಎಂಟಿಸಿ ಬಸ್ ವ್ಯವಸ್ಥೆ

ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಎಂಟಿಸಿ ಬಸ್ ವ್ಯವಸ್ಥೆ

ಕಿರಣ್ ಹನುಮಂತ್​ ಮಾದಾರ್
|

Updated on:Oct 11, 2024 | 2:27 PM

ದಸರಾ ಹಿನ್ನಲೆ ಜನರು ತಮ್ಮ ಊರುಗಳತ್ತ ಪ್ರಯಾಣ ಬೆಳಸಿದ್ದಾರೆ. ಪರಿಣಾಮ ಸಂಜೆ ಆಗುತ್ತಿದ್ದಂತೆ ಮೆಜೆಸ್ಟಿಕ್​ ಪ್ರಯಾಣಿಕರಿಂದ ತುಂಬಿದ್ದು, ಸೀಟ್​ಗಳು ಸಿಗದೆ ಕೆಲ ಪ್ರಯಾಣಿಕರು ನಿಂತು ಪ್ರಯಾಣ ಮಾಡುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಊರಿಗೆ ಹೋಗುತ್ತಿರುವ ಹಿನ್ನಲೆ ಬಿಎಂಟಿಸಿಯಿಂದ ಬರೊಬ್ಬರಿ 550 ಬಸ್​ಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಬೆಂಗಳೂರು, ಅ.10: ದಸರಾ ಹಿನ್ನಲೆ ಜನರು ತಮ್ಮ ಊರುಗಳತ್ತ ಪ್ರಯಾಣ ಬೆಳಸಿದ್ದಾರೆ. ಪರಿಣಾಮ ಸಂಜೆ ಆಗುತ್ತಿದ್ದಂತೆ ಮೆಜೆಸ್ಟಿಕ್​ ಪ್ರಯಾಣಿಕರಿಂದ ತುಂಬಿದ್ದು, ತಮ್ಮ ತಮ್ಮ ಊರುಗಳತ್ತ ಹೊರಡಲು ಸಾವಿರಾರು ಸಂಖ್ಯೆಯಲ್ಲಿ ಕೆಂಪೇಗೌಡ ಬಸ್ ಸ್ಟ್ಯಾಂಡ್​ನತ್ತ ಜನರು ಹರಿದು ಬರುತ್ತಿದ್ದಾರೆ. ಪ್ರತಿ ಬಸ್ ಕೂಡ ಫುಲ್ ಆಗುತ್ತಿದೆ. ಸೀಟ್​ಗಳು ಸಿಗದೆ ಕೆಲ ಪ್ರಯಾಣಿಕರು ನಿಂತು ಪ್ರಯಾಣ ಮಾಡುತ್ತಿದ್ದಾರೆ. ಈಗಾಗಲೇ ಎಲ್ಲಾ ಬಸ್ ಗಳು ಫುಲ್​ ಬುಕ್ಕಿಂಗ್ ಆಗಿವೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಊರಿಗೆ ಹೋಗುತ್ತಿರುವ ಹಿನ್ನಲೆ ಬಿಎಂಟಿಸಿಯಿಂದ ಬರೊಬ್ಬರಿ 550 ಬಸ್​ಗಳ ವ್ಯವಸ್ಥೆಯನ್ನು ಮಾಡಿದ್ದು, ಕೆಎಸ್ಆರ್​ಟಿಸಿ ಬಸ್ ನಿಲ್ದಾಣಕ್ಕೆ ಬಿಎಂಟಿಸಿ ಬಸ್ ಗಳು ಬಂದಿವೆ. ಇಂದು 250, ನಾಳೆ 250 ಹಾಗೂ ಭಾನುವಾರ 55 ಬಸ್ ವ್ಯವಸ್ಥೆ ಮಾಡಲಾಗಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ 2 ಸಾವಿರ ಕೆಎಸ್ಆರ್​ಟಿಸಿ ಬಸ್ಸುಗಳ ವ್ಯವಸ್ಥೆ

ಇನ್ನು ದಸರಾ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರ ಅನುಕೂಲಕ್ಕಾಗಿ 2 ಸಾವಿರ ಕೆಎಸ್ಆರ್​ಟಿಸಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಇಂದಿನಿಂದ (ಅ. 12) ಶನಿವಾರದ ವರೆಗೆ ಬೆಂಗಳೂರಿನಿಂದ ರಾಜ್ಯದ ಮತ್ತು ಅಂತರ್​ರಾಜ್ಯದ ವಿವಿಧ ಸ್ಥಳಗಳಿಗೆ
2000 ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಿಂದ ಸಂಚಾರ ಮಾಡಲಿದೆ.

ರಾಜ್ಯದ ಮತ್ತು ಅಂತರ್​ರಾಜ್ಯದ ವಿವಿಧ ಸ್ಥಳಗಳಿಗೆ ಬಸ್​ ವ್ಯವಸ್ಥೆ

ರಾಜ್ಯದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 10, 2024 08:12 PM