ಡಿವಿ ಸದಾನಂದಗೌಡ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿದ್ದು ಹೈಕಮಾಂಡ್ ಸೂಚನೆ ಕಾರಣ: ಬಿಎಸ್ ಯಡಿಯೂರಪ್ಪ
ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದು ಬೇಡ ಅಂತ ನೇರವಾಗಿ ವರಿಷ್ಠರು ಸದಾನಂದ ಗೌಡರಿಗೆ ಹೇಳಿದ್ದಾರೆ; ಆದರೆ ಪಕ್ಷದ ಬೇರೆಲ್ಲ ಚಟುವಟಿಕೆಗಳಲ್ಲಿ ಅವರು ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.
ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳು ಮಳೆಯಿಂದ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ವೀಕ್ಷಣೆಗೆ ತೆರಳುವ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa), ನಿನ್ನೆ ಚುನಾವಣಾ ರಾಜಕೀಯಕ್ಕೆ ವಿದಾಯ ಘೋಷಿಸಿದ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿವಿ ಸದಾನಂದ ಗೌಡ (DV Sadananda Gowda) ಅವರು ಹೈಕಮಾಂಡ್ (high command) ಸೂಚನೆ ಮೇರೆಗೆ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ ಎಂದು ಹೇಳಿದರು. 2024 ಲೋಕ ಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಟಿಕೆಟ್ ಸಿಗಲಾರದೆನ್ನುವ ಕಾರಣಕ್ಕೆ ಅವರು ಚುನಾವಣಾ ರಾಜಕೀಯದಿಂದ ದೂರ ಸರಿಯವ ನಿರ್ಧಾರ ಮಾಡಿದರೇ ಅಂತ ಮಾಧ್ಯಮದವರು ಕೇಳಿದ ಪ್ರಶ್ನೆಗೆ, ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದು ಬೇಡ ಅಂತ ನೇರವಾಗಿ ವರಿಷ್ಠರು ಅವರಿಗೆ ಹೇಳಿದ್ದಾರೆ; ಆದರೆ ಪಕ್ಷದ ಬೇರೆಲ್ಲ ಚಟುವಟಿಕೆಗಳಲ್ಲಿ ಅವರು ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
