‘ದ್ವಾಪರ..’ ಸಿನಿಮಾ ಹಾಡಿದ ಜಸ್ಕರಣ್​ ಸಿಂಗ್ ಒರಿಜಿನಲ್ ಧ್ವನಿ ಹೇಗಿದೆ ನೋಡಿ

Updated on: Aug 12, 2024 | 8:12 AM

ಇದು ರೀಲ್ಸ್ ಯುಗ. ಯಾವುದೇ ಸಾಂಗ್ ಹಿಟ್ ಆದರೂ ಅದನ್ನು ಇನ್​ಸ್ಟಾಗ್ರಾಮ್ ರೀಲ್ಸ್​ನಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತದೆ. ಈಗ ‘ದ್ವಾಪರ..’ ಹಾಡಿನಲ್ಲಿ ಬರುವ ಕೆಲವು ಸಾಲುಗಳು ರೀಲ್ಸ್​ನಲ್ಲಿ ಬಳಕೆ ಮಾಡಲಾಗಿದೆ. ಹೀಗಾಗಿ, ಈ ಹಾಡಿನಿಂದ ಸಿನಿಮಾಗೆ ಭರ್ಜರಿ ಮೈಲೇಜ್ ಸಿಕ್ಕಿದೆ.

ಬೆಂಗಳೂರಿನ ಜಿಟಿ ಮಾಲ್​ನಲ್ಲಿ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದ ಪ್ರೀ ರಿಲೀಸ್ ಈವೆಂಟ್ ನಡೆದಿದೆ. ಆಗಸ್ಟ್ 15ರಂದು ಈ ಚಿತ್ರ ರಿಲೀಸ್ ಆಗಲಿದೆ. ಈ ಸಿನಿಮಾ ಬಗ್ಗೆ ನಟ ಗಣೇಶ್ ಅವರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದ ‘ದ್ವಾಪರ..’ ಹಾಡು ಸೂಪರ್ ಹಿಟ್ ಆಗಿದೆ. ಈ ಹಾಡನ್ನು ಹಾಡಿದ್ದು ಜಸ್ಕರಣ್ ಸಿಂಗ್. ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಅವರು ಈ ಹಾಡಿನ ಬಗ್ಗೆ ಮಾತನಾಡಿದ್ದಾರೆ. ‘ನನಗೆ ಖುಷಿ ಇದೆ. ನನಗೆ ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದ. ನನಗೆ ಖುಷಿ ಇದೆ. ಇದು ದೊಡ್ಡ ಹಿಟ್ ಆಗಿದೆ’ ಎಂದಿದ್ದಾರೆ ಅವರು. ‘ದ್ವಾಪರ..’ ಹಾಡು ಯೂಟ್ಯೂಬ್​ನಲ್ಲಿ ಕೋಟಿ ಬಾರಿ ವೀಕ್ಷಣೆ ಕಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More