Sign In

By signing in or creating an account, you agree with Associated Broadcasting Company's Terms & Conditions and Privacy Policy.

'ನಿಮ್ಮ ನಗುಮುಖವನ್ನೇ ಸದಾ ನೆನೆಯುತ್ತ ಬೀಳ್ಕೊಡುವೆ';ದ್ವಾರಕೀಶ್ ನಿಧನಕ್ಕೆ ಶಿವರಾಜ್​​ಕುಮಾರ್​ ಭಾವುಕ

‘ನಿಮ್ಮ ನಗುಮುಖವನ್ನೇ ಸದಾ ನೆನೆಯುತ್ತ ಬೀಳ್ಕೊಡುವೆ’;ದ್ವಾರಕೀಶ್ ನಿಧನಕ್ಕೆ ಶಿವರಾಜ್​​ಕುಮಾರ್​ ಭಾವುಕ

ಅಕ್ಷತಾ ವರ್ಕಾಡಿ
|

Updated on: Apr 16, 2024 | 2:17 PM

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್​​​ ಅವರು ಸಂತಾಪ ಸೂಚಿಸಿದ್ದಾರೆ. "ಕನ್ನಡ ಚಿತ್ರರಂಗಕ್ಕೆ ನಿಮ್ಮ ಕೊಡುಗೆ ಅಪಾರ. ನಿಮ್ಮ ನಗುಮುಖವನ್ನೇ ಸದಾ ನೆನೆಯುತ್ತ ಬೀಳ್ಕೊಡುವೆ. ಹೋಗಿ ಬನ್ನಿ ದ್ವಾರಕೀಶ್ ಮಾಮ" ಎಂದು ಟ್ವೀಟ್​ ಮಾಡಿದ್ದಾರೆ.

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (Dwarakish) ಅವರು ಇಂದು (ಏ 16) ನಿಧನ ಹೊಂದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಅಗಲಿದ ಹಿರಿಯ ನಟನಿಗೆ ವಿವಿಧ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ. ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್​​​ ಅವರು ಸಂತಾಪ ಸೂಚಿಸಿದ್ದಾರೆ. “ಕನ್ನಡ ಚಿತ್ರರಂಗಕ್ಕೆ ನಿಮ್ಮ ಕೊಡುಗೆ ಅಪಾರ. ನಿಮ್ಮ ನಗುಮುಖವನ್ನೇ ಸದಾ ನೆನೆಯುತ್ತ ಬೀಳ್ಕೊಡುವೆ. ಹೋಗಿ ಬನ್ನಿ ದ್ವಾರಕೀಶ್ ಮಾಮ” ಎಂದು ಟ್ವೀಟ್​ ಮಾಡಿದ್ದಾರೆ. ಇದಲ್ಲದೇ ಚುನಾವಣಾ ಪ್ರಚಾರದಲ್ಲಿರುವುದರಿಂದಾಗಿ ಶಿವಮೊಗ್ಗದಲ್ಲಿರುವ ಶಿವರಾಜ್​​ ಕುಮಾರ್​​​ ಅವರು ದ್ವಾರಕೀಶ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ” ದ್ವಾರಕೀಶ್ ಮಾಮನಿಗೆ ಅಪ್ಪಾಜಿಯವರೊಂದಿಗೆ ಒಳ್ಳೆಯ ಸ್ನೇಹ ಇತ್ತು. ಅವರು ನಮ್ಮ ಕುಟುಂಬದ ಭಾಗವಾಗಿದ್ದರು. ಅವರ ಅಗಲಿಕೆ ನನಗೆ ಬಹಳ ನೋವುಂಟು ಮಾಡಿದೆ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಕಂಬನಿ ಮಿಡಿದ್ದಾರೆ.