AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಾರಕೀಶ್ ಪಂಚಭೂತಗಳಲ್ಲಿ ಲೀನ; ಹಿರಿಯ ಮಗನಿಂದ ಚಿತೆಗೆ ಅಗ್ನಿಸ್ಪರ್ಶ

ದ್ವಾರಕೀಶ್ ಪಂಚಭೂತಗಳಲ್ಲಿ ಲೀನ; ಹಿರಿಯ ಮಗನಿಂದ ಚಿತೆಗೆ ಅಗ್ನಿಸ್ಪರ್ಶ

ರಾಜೇಶ್ ದುಗ್ಗುಮನೆ
|

Updated on:Apr 17, 2024 | 2:02 PM

Share

ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ದ್ವಾರಕೀಶ್ ಅವರಿಗೆ ಗೌರವವಂದನೆ ನೀಡಲಾಗಿದೆ. ಹಿರಿಯ ಮಗ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ವೇಳೆ ಕುಟುಂಬದವರು ಹಾಗೂ ಆಪ್ತರು ಹಾಜರಿದ್ದರು. ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಸಾಕಷ್ಟು ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

ದ್ವಾರಕೀಶ್ (Dwarakish) ಅವರ ಅಂತಿಮ ವಿಧಿವಿಧಾನ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ರುದ್ರಭೂಮಿಯಲ್ಲಿ ನಡೆದಿದೆ. ಬ್ರಾಹ್ಮಣ ಸಂಪ್ರದಾಯದಂತೆ ವಿಧಿ ವಿಧಾನವನ್ನು ನಡೆಸಲಾಗಿದೆ. ದ್ವಾರಕೀಶ್ ಅವರ ಹಿರಿಯ ಮಗ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ವೇಳೆ ಕುಟುಂಬದವರು ಹಾಗೂ ಆಪ್ತರು ಹಾಜರಿದ್ದರು. ಅಂತಿಮ ಸಂಸ್ಕಾರಕ್ಕೂ ಮೊದಲು ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವವಂದನೆ ನೀಡಲಾಗಿದೆ. ದ್ವಾರಕೀಶ್ ಅವರು ಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದರು. ನಟನಾಗಿ, ನಿರ್ಮಾಪಕನಾಗಿ ಹಾಗೂ ನಿರ್ದೇಶಕನಾಗಿ ಅವರು ಹೆಸರು ಮಾಡಿದ್ದರು. ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಸಾಕಷ್ಟು ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ. ಸಾಕಷ್ಟು ಜನರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ಖ್ಯಾತಿ ಅವರಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Apr 17, 2024 01:29 PM

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More