Dy CM returns to Delhi: ದೆಹಲಿಯಿಂದ ಅಪರಾತ್ರಿ ಬೆಂಗಳೂರಿಗೆ ಬಂದಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಳಗ್ಗೆಯೇ ವಾಪಸ್ಸು ಹೊರಟರು!

ಅರುಣ್​ ಕುಮಾರ್​ ಬೆಳ್ಳಿ

Updated on: May 26, 2023 | 11:06 AM

ಕಾರಲ್ಲೇ ಕುಳಿತು ಕರೆ ಅಟೆಂಡ್ ಮಾಡುವ ಉಪ ಮುಖ್ಯಮಂತ್ರಿಗಳು ಮಾತಾಡುವಾಗ ಅಸಹನೆ ವ್ಯಕ್ತಪಡಿಸುತ್ತಾರೆ.

ಬೆಂಗಳೂರು:  ನಿನ್ನೆ ಅಪರಾತ್ರಿ ದೆಹಲಿಯಿಂದ ಬೆಂಗಳೂರಿಗೆ ವಾಪಸ್ಸಾಗಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಂದ ಬೆಳಗ್ಗೆಯೇ ರಾಷ್ಟ್ರದ ರಾಜಧಾನಿಗೆ ವಾಪಸ್ಸು ಹೊರಟರು. ಒಂದು ಚಿಕ್ಕ ಖಾಸಗಿ ಕಾರ್ಯಕ್ರಮಕ್ಕಾಗಿ (private programme) ಬೆಂಗಳೂರಿಗೆ ಬಂದಿದ್ದೆ ಎಂದು ರಾತ್ರಿ ಶಿವಕುಮಾರ್ ಹೇಳಿದ್ದರು. ಕೆಲವೇ ಗಂಟೆಗಳ ಅವಧಿಯಲ್ಲಿ ಅವರು ಆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ಸು ದೆಹಲಿಗೆ ಹೋಗಲು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (KIA) ಆಗಮಿಸುತ್ತಿರುವುದನ್ನು ಇಲ್ಲಿ ನೋಡಬಹುದು. ಕಾರಿನಿಂದ ಇಳಿಯುವಾಗ ಅವರಿಗೆ ಯಾರದ್ದೋ ಫೊನ್ ಬರುತ್ತದೆ. ಅದನ್ನು ಕಾರಲ್ಲೇ ಕುಳಿತು ಅಟೆಂಡ್ ಮಾಡುವ ಉಪ ಮುಖ್ಯಮಂತ್ರಿಗಳು ಮಾತಾಡುವಾಗ ಅಸಹನೆ ವ್ಯಕ್ತಪಡಿಸುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.