AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರಿಂಗಾನ ಕಂಬಳ: ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ

ನರಿಂಗಾನ ಕಂಬಳ: ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ

ಪ್ರಸನ್ನ ಹೆಗಡೆ
|

Updated on: Jan 11, 2026 | 9:23 AM

Share

ಉಳ್ಳಾಲ ತಾಲೂಕಿನ ನರಿಂಗಾನದಲ್ಲಿ ನಡೆದ ಲವ-ಕುಶ ಜೋಡುಕರೆ ಕಂಬಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಮಾಡಲು ಮತ್ತು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ಬೇಡಿಕೆ ಸಲ್ಲಿಸಲಾಯಿತು. ಸಭಾಪತಿ ಯು.ಟಿ. ಖಾದರ್ ಅವರ ನಾಯಕತ್ವದಲ್ಲಿ ನಡೆದ ಈ ಕಂಬಳಕ್ಕೆ ಡಿಸಿಎಂ ಅವರಿಗೆ ಅದ್ದೂರಿ ಸ್ವಾಗತ ದೊರೆಯಿತು.

ಮಂಗಳೂರು, ಜನವರಿ 11: ಉಳ್ಳಾಲ ತಾಲೂಕಿನ ನರಿಂಗಾನದಲ್ಲಿ ಆಯೋಜಿಸಲಾಗಿದ್ದ ಲವ-ಕುಶ ಜೋಡುಕರೆ ಕಂಬಳದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿದ್ದರು. ಕೋಣಗಳ ಓಟಕ್ಕೆ ಡಿಕೆಶಿ ಫಿದಾ ಆಗಿದ್ದು, ಸ್ಪೀಕರ್ ಯು.ಟಿ. ಖಾದರ್ ಅವರ ನಾಯಕತ್ವದಲ್ಲಿ ಕಂಬಳ ಆಯೋಜಿಸಲಾಗಿತ್ತು. ಇದೇ ವೇಳೆ ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಮತ್ತು ಅದನ್ನು ಭಾರತದ ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕ್ರಮ ಕೈಗೊಳ್ಳುವಂತೆ ಡಿಸಿಎಂ ಬಳಿ ಬೇಡಿಕೆ ಇಡಲಾಯಿತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.