ಕುಮಾರಸ್ವಾಮಿ ಚರ್ಚೆಗೆ ಬರಲಿ: ಕೇಂದ್ರ ಸಚಿವರಿಗೆ ಡಿಸಿಎಂ ಡಿಕೆಶಿ ಸವಾಲು
ತಮ್ಮ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ಕಾರಿದ್ದಾರೆ. ಮೊದಲಿಂದಲೂ ನನ್ನನ್ನು ಜೈಲಿಗೆ ಹಾಕಲು ಸಂಕಲ್ಪ, ಷಡ್ಯಂತ್ರ ಮಾಡಿದ್ದಾರೆ. ಕುಮಾರಸ್ವಾಮಿ ಚರ್ಚೆಗೆ ಬರಲಿ. ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 30: ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ಜೈಲಿಗೆ ಹೋಗ್ತಾರೆಂಬ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಹೇಳಿಕಗೆ ಸ್ವತಃ ಉಪ ಮುಖ್ಯಮಂತ್ರಿಗಳೇ ತಿರುಗೇಟು ನೀಡಿದ್ದಾರೆ. ಮೊದಲಿಂದಲೂ ನನ್ನನ್ನು ಜೈಲಿಗೆ ಹಾಕಲು ಸಂಕಲ್ಪ, ಷಡ್ಯಂತ್ರ ಮಾಡಿದ್ದಾರೆ. ಕುಮಾರಸ್ವಾಮಿ ಏನೇನು ಮಾತನಾಡಿದ್ದಾರೆ ಎಲ್ಲದಕ್ಕೂ ಉತ್ತರ ಕೊಡ್ತೇನೆ. ಮೊದಲಿಂದಲೂ ನಮ್ಮ ವಿರುದ್ಧ ಅವರ ಕುಟುಂಬ ಷಡ್ಯಂತ್ರ ಮಾಡ್ತಿದೆ. HDK ಸಿಎಂ ಆಗಿದ್ದಾಗ ನನ್ನ ತಂಗಿ, ತಮ್ಮನ ಮೇಲೆ ಕೇಸ್ ಹಾಕಿಸಿದ್ದರು. ಇದು ಕೊನೆ ಆಗಬೇಕಿದ್ದು, ಯಾವುದಾದರೂ ಮಾಧ್ಯಮದಲ್ಲಿ ಕುಮಾರಸ್ವಾಮಿ ಚರ್ಚೆಗೆ ಬರಲಿ ಎಂದು ಡಿಕೆಶಿ ಸವಾಲು ಹಾಕಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Sep 30, 2025 06:12 PM

