ಪೀಕ್​ ಅವರ್​ ವೇಳೆ ಕಾರಲ್ಲಿ ಹೋದ್ರೆ ದಂಡ!: ಡಿಸಿಎಂ ಡಿಕೆಶಿ ಹೇಳಿದ್ದೇನು?

Edited By:

Updated on: Sep 30, 2025 | 5:14 PM

ಪೀಕ್​ ಅವರ್​ ವೇಳೆ ಕಾರಿನಲ್ಲಿ ಹೋಗುವವರಿಗೆ ಇನ್ನು ಮುಂದೆ ದಂಡ ವಿಧಿಸಲಾಗುತ್ತೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಸ್ವತಃ ಡಿಸಿಎಂ ಡಿ.ಕೆ. ಶಿವಕುಮಾರ್​ ಸ್ಪಷ್ಟನೆ ಕೊಟ್ಟಿದ್ದು, ರಾಜ್ಯ ಸರ್ಕಾರ ಆ ರೀತಿಯ ಯಾವುದೇ ನಿರ್ಣಯ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​ 30: ಪೀಕ್​ ಅವರ್​ ವೇಳೆ ಕಾರಿನಲ್ಲಿ ಹೋಗುವವರಿಗೆ ದಂಡ ವಿಧಿಸಲಾಗುತ್ತೆ ಎಂಬ ಸುದ್ದಿ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)​ ಸ್ಪಷ್ಟನೆ ಕೊಟ್ಟಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಉಪ ಮುಖ್ಯಮಂತ್ರಿಗಳು, ಇದೆಲ್ಲ ಸುಳ್ಳು ಸುದ್ದಿ. ರಾಜ್ಯ ಸರ್ಕಾರದ ಎದುರು ಆ ರೀತಿ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ದಂಡದ ವಿಚಾರವಾಗಿ ಕೇಳಿಬಂದಿದ್ದ ಊಹಾಪೋಹಗಳಿಗೆ ಡಿಸಿಎಂ ತೆರೆ ಎಳೆದಿದ್ದಾರೆ.

ಮತ್ತಷ್ಟು ವಿಡಿಯೋಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More