ಧರ್ಮಸ್ಥಳ ವಿರುದ್ಧ ಬುರುಡೆ ಗ್ಯಾಂಗ್ ಷಡ್ಯಂತ್ರದ ಬಗ್ಗೆ ಡಿ.ಕೆ. ಶಿವಕುಮಾರ್ ಮಾತು
ಧರ್ಮಸ್ಥಳ ಕೇಸ್ ವಿಚಾರವಾಗಿ ತನಿಖೆ ನಡೆಸಿರುವ ಎಸ್ಐಟಿ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ಬುರುಡೆ ಗ್ಯಾಂಗ್ ಹೇಳಿದ್ದೆಲ್ಲ ಬರೀ ಬರುಡೆ ಎಂಬುದು ಬಹಿರಂಗವಾಗಿದ್ದು, ಷಡ್ಯಂತ್ರ ನಡೆಸಿರೋದು ಜಗಜ್ಜಾಹೀರವಾಗಿದೆ. ಚಿನ್ನಯ್ಯ, ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ವಿಠ್ಠಲ ಗೌಡ, ಟಿ. ಜಯಂತ್ ಹಾಗೂ ಸುಜಾತಾ ಭಟ್ ಅಪರಾಧ ಕೃತ್ಯದಲ್ಲಿ ಶಾಮೀಲಾಗಿರುವ ಬಗ್ಗೆ ಎಸ್ಐಟಿ ದೃಢಪಡಿಸಿದೆ. ಆ ಬೆನ್ನಲ್ಲೇ ಈ ಘಟನೆಯ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬೆಳಗಾವಿಯಲ್ಲಿ ಮಾತನಾಡಿದ್ದಾರೆ.
ಬೆಳಗಾವಿ, ಡಿಸೆಂಬರ್ 10: ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಸಾಮೂಹಿಕ ಸಮಾಧಿ ಕೇಸ್ ವಿಚಾರವಾಗಿ ಎಸ್ಐಟಿ ತನಿಖೆಯಲ್ಲಿ ಬುರುಡೆ ಗ್ಯಾಂಗ್ ಕಳ್ಳಾಟ ಬಯಲಾಗಿದೆ. ಈ ಬಗ್ಗೆ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ನಡೆದ ಜೈನ ಮುನಿಗಳ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಸ್ತಾಪಿಸಿದ್ದಾರೆ. ವೀರೇಂದ್ರ ಹೆಗ್ಗಡೆ ಅವರ ಕಷ್ಟಕಾಲದಲ್ಲಿ ನಾನು ತೆಗೆದುಕೊಂಡ ನಿರ್ಧಾರದ ಬಗ್ಗೆ ರಾಷ್ಟ್ರೀಯ ಮಾಧ್ಯಮದವರೂ ಸೇರಿ ಅನೇಕ ನಾಯಕರು ನನ್ನ ಪ್ರಶ್ನೆ ಮಾಡಿದ್ದರು. ವೀರೇಂದ್ರ ಹೆಗ್ಗಡೆಯವರ ಮೇಲೆ ಯಾವ ರೀತಿ ಷಡ್ಯಂತ್ರ ಆಯ್ತು ಎನ್ನುವುದು ಈಗ ಗೊತ್ತಾಗಿದೆ. ಹೀಗಾಗಿ ಇಡೀ ಜೈನ ಸಮುದಾಯ ಒಳ್ಳೆಯ ಕೆಲಸ ಮಾಡಿದ್ದೀರಾ ಎಂದು ನನ್ನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ಡಿಕೆಶಿ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
