ಕಾಂಗ್ರೆಸ್ ಹಿರಿಯ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ನಿಧನ: ಅಂತಿಮ ದರ್ಶನ ಪಡೆದ ಡಿ.ಕೆ. ಶಿವಕುಮಾರ್

Edited By:

Updated on: May 19, 2026 | 7:26 PM

ಕಾಂಗ್ರೆಸ್ ಹಿರಿಯ ನಾಯಕ ಹಾಜಿ ಸೈಯದ್ ಜಿಯಾವುಲ್ಲಾ ನಿಧನರಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿರುವ ತೋಪ್‌ಖಾನ್ ಮೊಹಲ್ಲಾದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಡಿ.ಕೆ.ಶಿವಕುಮಾರ್ ಜೊತೆ ಸಾಕಷ್ಟು ನಿಕಟ ಸಂಬಂಧ ಹೊಂದಿದ್ದ ಜಿಯಾವುಲ್ಲಾ, ಹೃದಯಾಘಾತದಿಂದ ನಿಧನರಾಗಿದ್ದಾರೆ.

ರಾಮನಗರ, ಮೇ 19: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಹಾಜಿ ಸೈಯದ್ ಜಿಯಾವುಲ್ಲಾ ಹೃದಯಾಘಾತದಿಂದ ನಿಧನರಾಗಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿರುವ ತೋಪ್‌ಖಾನ್ ಮೊಹಲ್ಲಾದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಡಿಸಿಎಂ ಡಿ.ಕೆ. ಶಿವಕುಮಾರ್​​ ಪಡೆದಿದ್ದಾರೆ. ಡಿ.ಕೆ.ಶಿವಕುಮಾರ್ ಜೊತೆ ಜಿಯಾವುಲ್ಲಾ ಸಾಕಷ್ಟು ನಿಕಟ ಸಂಬಂಧ ಹೊಂದಿದ್ದರು. ಅಂತಿಮ ದರ್ಶನದ ಬಳಿಕ ಮಾತನಾಡಿದ ಡಿಸಿಎಂ, ಸುಮಾರು 40 ವರ್ಷಗಳಿಂದ ಜಿಯಾವುಲ್ಲಾ ನನಗೆ ಪರಿಚಯವಿದ್ದು, ನಮ್ಮ ಪಕ್ಷದ ಆಧಾರವಾಗಿದ್ದರು. ತಿರುಪತಿಯಲ್ಲಿದ್ದ ನನಗೆ ಅವರ ಸಾವಿನ ಸುದ್ದಿ ಕೇಳಿ ಬಹಳ ಆಘಾತವಾಗಿದೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: May 19, 2026 07:26 PM
Follow Us
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More