ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿ.ಕೆ. ಶಿವಕುಮಾರ್​​

Edited By:

Updated on: May 21, 2026 | 12:47 PM

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಐತಿಹಾಸಿಕ ಮಧ್ಯರಂಗ ದೇವಾಲಯದ ಜೀರ್ಣೋದ್ಧಾರ ಕಾರ್ಯ ಪೂರ್ಣಗೊಂಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದರು. ಕಾವೇರಿ ನದಿ ತೀರದಲ್ಲಿರುವ ಈ ದೇವಾಲಯವು ಭಕ್ತರಿಗೆ ಪ್ರಮುಖ ಧಾರ್ಮಿಕ ಕೇಂದ್ರವಾಗಿದೆ. ಸರ್ಕಾರದ ಇತರ ಅಭಿವೃದ್ಧಿ ಕಾರ್ಯಗಳ ಕುರಿತು ಸಹ ಅವರು ಇದೇ ವೇಳೆ ಮಾಹಿತಿ ನೀಡಿದ್ದಾರೆ.

ಚಾಮರಾಜನಗರ, ಮೇ 21: ಕೊಳ್ಳೇಗಾಲ ತಾಲೂಕಿನಲ್ಲಿರುವ ಐತಿಹಾಸಿಕ ಮಧ್ಯರಂಗ ದೇವಾಲಯದ ಜೀರ್ಣೋದ್ಧಾರ ಕಾರ್ಯಗಳು ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡಿದ್ದಾರೆ. ಕಾವೇರಿ ನದಿಯ ತೀರದಲ್ಲಿರುವ ಈ ಪುಣ್ಯಕ್ಷೇತ್ರವು ಧಾರ್ಮಿಕ ಮಹತ್ವವನ್ನು ಹೊಂದಿದೆ. ರಾಜಕಾರಣದಲ್ಲಿ ಈ ಪ್ರದೇಶಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ನಂಬಿಕೆ ಇದೆ. ಆದರೆ ಡಿ.ಕೆ.ಶಿವಕುಮಾರ್ ಅವರು ಇದು ಭಕ್ತಿ ಮತ್ತು ಭಗವಂತನ ನಡುವಿನ ಸಂಬಂಧಕ್ಕೆ ಸಂಬಂಧಿಸಿದ್ದು ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: May 21, 2026 12:45 PM
Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More