AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

'ಉನ್ನತ ಹುದ್ದೆ ಹತ್ತಿರಕ್ಕೆ ಬಂದು ತಪ್ಪಿದೆ': ಸಿಎಂ ಸ್ಥಾನ ಸಿಗದಿದ್ದಕ್ಕೆ ಡಿಸಿಎಂ ಡಾ.ಜಿ. ಪರಮೇಶ್ವರ್​​ ಬೇಸರ

‘ಉನ್ನತ ಹುದ್ದೆ ಹತ್ತಿರಕ್ಕೆ ಬಂದು ತಪ್ಪಿದೆ’: ಸಿಎಂ ಸ್ಥಾನ ಸಿಗದಿದ್ದಕ್ಕೆ ಡಿಸಿಎಂ ಡಾ.ಜಿ. ಪರಮೇಶ್ವರ್​​ ಬೇಸರ

ಜಗದೀಶ ಬಿ.
| Edited By: |

Updated on:Nov 15, 2026 | 10:27 AM

Share

ಡಿಸಿಎಂ ಡಾ. ಜಿ. ಪರಮೇಶ್ವರ್ ಅವರು ಮುಖ್ಯಮಂತ್ರಿ ಹುದ್ದೆಗೆ ಹತ್ತಿರ ಬಂದು ತಪ್ಪಿ ಹೋಗಿರುವ ಬಗ್ಗೆ ತುಮಕೂರಿನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. 40 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಅನೇಕ ಏಳುಬೀಳುಗಳನ್ನು ಕಂಡಿದ್ದು, ಅಧಿಕಾರ ಶಾಶ್ವತವಲ್ಲ, ಮಾಡಿದ ಕೆಲಸ ಶಾಶ್ವತ ಎಂದು ಹೇಳಿದ್ದಾರೆ. ಜನತೆಯ ಆಶೀರ್ವಾದದಿಂದ ತಾನು ಎರಡನೇ ಬಾರಿಗೆ ಉಪಮುಖ್ಯಮಂತ್ರಿಯಾಗಿದ್ದೇನೆ ಎಂದರು.

ತುಮಕೂರು, ನವೆಂಬರ್​​ 15: ತುಮಕೂರಿನಲ್ಲಿ ನಡೆದ ಎಲ್ಇಡಿ ಪರದೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಮುಖ್ಯಮಂತ್ರಿ ಹುದ್ದೆಗೆ ಹತ್ತಿರ ಬಂದು ತಪ್ಪಿ ಹೋಗಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ತಮ್ಮ ಸುದೀರ್ಘ ರಾಜಕೀಯ ಪಯಣದ ಅನುಭವಗಳನ್ನು ಹಂಚಿಕೊಂಡ ಡಿಸಿಎಂ, ಅಧಿಕಾರ ಶಾಶ್ವತವಲ್ಲ, ಮಾಡಿದ ಕೆಲಸ ಶಾಶ್ವತ ಎಂದು ಅಭಿಪ್ರಾಯಪಟ್ಟಿದ್ದಾರೆ. ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ಅನೇಕ ಏಳುಬೀಳುಗಳನ್ನು ನೋಡಿದ್ದೇನೆ. 1989ರಲ್ಲಿ ಈ ಜಿಲ್ಲೆಯಿಂದ ಶಾಸಕರಾಗಿ ಆಯ್ಕೆಯಾದಾಗ, ವಿದೇಶದಿಂದ ಓದಿ ಬಂದ ತಮಗೆ ರಾಜಕಾರಣ ಆಗ ಹೊಸತು. ಅಂದಿನಿಂದ ಇಲ್ಲಿಯವರೆಗೂ ಅನೇಕ ಬಾರಿ ಉನ್ನತ ಹುದ್ದೆಗಳು ಹತ್ತಿರ ಬಂದು ತಪ್ಪಿ ಹೋದ ಸಂದರ್ಭಗಳನ್ನೂ ಅನುಭವಿಸಿದ್ದೇನೆ. ಆದರೆ ಜನತೆಯ ಆಶೀರ್ವಾದದಿಂದ ಶಾಸಕರಾಗಿ, ಹಲವು ಖಾತೆಗಳನ್ನು ನಿಭಾಯಿಸಿ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ . ಈ ರಾಜ್ಯದ ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಜನ ನೀಡಿದ್ದು, ಎರಡನೇ ಬಾರಿಗೆ ಉಪಮುಖ್ಯಮಂತ್ರಿಯಾಗಿರೋದಾಗಿ ಅವರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Nov 15, 2026 10:26 AM

Follow Us
ಜಗದೀಶ ಬಿ.
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More