ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ: ಜಲ ಯೋಜನೆಗಳ ಅನುಷ್ಠಾನ ವಿಚಾರವಾಗಿ ಕಿಡಿ
ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಚಿಕ್ಕಬಳ್ಳಾಪುರದಲ್ಲಿ ಬರ ಪರಿಶೀಲನಾ ಸಭೆಯಲ್ಲಿ ಜಲ ಜೀವನ್ ಮಿಷನ್ ಅನುಷ್ಠಾನದ ವಿಳಂಬದ ಬಗ್ಗೆ ಅಧಿಕಾರಿಗಳ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯೋಜನೆಗೆ ಹಣದ ಕೊರತೆ ಇಲ್ಲ, ಆದರೆ ಅನುಷ್ಠಾನದಲ್ಲಿ ಲೋಪವಾಗಿದೆ ಎಂದು ಅವರು ಹೇಳಿದ್ದು, ಕಾರ್ಯವನ್ನು ತಕ್ಷಣ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ.
ಚಿಕ್ಕಬಳ್ಳಾಪುರ, ಜುಲೈ 22: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನದಲ್ಲಿ ವಿಳಂಬವಾಗಿರುವ ಬಗ್ಗೆ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗವೂ ನಡೆದಿದೆ. ಯೋಜನೆಗೆ ಹಣದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದ ಡಿಸಿಎಂ, ಕೇಂದ್ರ ಸರ್ಕಾರ ಕೂಡ ತನ್ನ ಪಾಲನ್ನು ನೀಡಿದೆ, ನಾವು ಕೂಡ ನಮ್ಮ ಪಾಲನ್ನು ನೀಡಿರುವ ಕಾರಣ ಹಣದ ಕೊರತೆ ಇಲ್ಲ. ಆದರೆ ಅಧಿಕಾರಿಗಳು ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದಾರೆ ಎಂದು ಅವರು ಗರಂ ಆಗಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
