AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆ ಇಲ್ಲದ ಜಮೀನಿಗೆ ಇ-ಸ್ವತ್ತು: ಗ್ರಾಮೀಣ ಭಾಗದ ಜನರಿಗೆ ಈಶ್ವರ ಖಂಡ್ರೆ ಗುಡ್​ ನ್ಯೂಸ್

ದಾಖಲೆ ಇಲ್ಲದ ಜಮೀನಿಗೆ ಇ-ಸ್ವತ್ತು: ಗ್ರಾಮೀಣ ಭಾಗದ ಜನರಿಗೆ ಈಶ್ವರ ಖಂಡ್ರೆ ಗುಡ್​ ನ್ಯೂಸ್

ಅನಿಲ್​ ಕಲ್ಕೆರೆ
| Edited By: |

Updated on:Oct 31, 2026 | 5:52 PM

Share

ಗ್ರಾಮೀಣ ಭಾಗದ ದಾಖಲೆರಹಿತ ಆಸ್ತಿಗಳಿಗೆ ಇ-ಸ್ವತ್ತು ನೀಡಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ನವೆಂಬರ್ 2ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಸಚಿವ ಈಶ್ವರ ಖಂಡ್ರೆ ಅವರು ಸುಮಾರು 25-30 ಲಕ್ಷ ಆಸ್ತಿ ಮಾಲೀಕರಿಗೆ ಇದರ ಪ್ರಯೋಜನವಾಗಲಿದೆ ಎಂದು ತಿಳಿಸಿದ್ದಾರೆ. ಬಿ-ಖಾತಾ ಪಡೆಯುವ ಪ್ರಕ್ರಿಯೆಯನ್ನೂ ಸರಳೀಕರಿಸಲಾಗಿದೆ.

ಬೆಂಗಳೂರು, ಅಕ್ಟೋಬರ್​​ 31: ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ದಾಖಲೆ ರಹಿತ ಆಸ್ತಿ ಹೊಂದಿರುವವರಿಗೆ ಇ-ಸ್ವತ್ತು ನೀಡುವ ಮಹತ್ವದ ಯೋಜನೆಯನ್ನು ಕರ್ನಾಟಕ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಘೋಷಿಸಿದ್ದು, ನವೆಂಬರ್ 2 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ರಾಜ್ಯದ ಸುಮಾರು 25 ರಿಂದ 30 ಲಕ್ಷ ಆಸ್ತಿ ಮಾಲೀಕರಿಗೆ ಇದು ನೆರವಾಗಲಿದೆ ಎಂದು ಅವರು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಅ.2ರಿಂದ ಇ-ಸ್ವತ್ತು ಅರ್ಜಿ ಜಾರಿ ಮಾಡುತ್ತೇನೆಂದು ಹೇಳಿದ್ದೆ, ನೀತಿ ಸಂಹಿತೆ ಇದ್ದ ಕಾರಣ ಆಗಲಿಲ್ಲ. ಬಿ-ಖಾತಾ ಪಡೆಯುವ ಪ್ರಕ್ರಿಯೆ ಸಡಿಲೀಕರಣ ಮಾಡುತ್ತೇವೆ. ಕೆಇಬಿ ಬಿಲ್, ವಾಸ ದೃಢೀಕರಣ ಪತ್ರ ಪಡೆದು ಇ-ಸ್ವತ್ತು ನೀಡುತ್ತೇವೆ’ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Oct 31, 2026 05:48 PM

Follow Us
ಅನಿಲ್​ ಕಲ್ಕೆರೆ
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More