AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 3.0ರಷ್ಟು ತೀವ್ರತೆ ದಾಖಲು

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 3.0ರಷ್ಟು ತೀವ್ರತೆ ದಾಖಲು

ನವೀನ್ ಕುಮಾರ್ ಟಿ.
| Edited By: |

Updated on: Oct 23, 2026 | 5:16 PM

Share

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 3.0 ದಾಖಲಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ತಿಳಿಸಿದೆ. ಭೂಮಿಯ 10 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರ ಪತ್ತೆಯಾಗಿರುವ ಮಾಹಿತಿ ಇದೆ.

ದೇವನಹಳ್ಳಿ, ಅಕ್ಟೋಬರ್​​ 23: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.0 ದಾಖಲಾಗಿದ್ದು, ಭೂಮಿಯ 10 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರ ಪತ್ತೆಯಾಗಿದೆ. ಭೂಕಂಪನದ ಕೇಂದ್ರದಿಂದ ಸುಮಾರು 20ರಿಂದ 30 ಕಿ.ಮೀ. ವ್ಯಾಪ್ತಿಯಲ್ಲಿ ಕಂಪನದ ಅನುಭವವಾಗಿರುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ತಿಳಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More