ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 3.0ರಷ್ಟು ತೀವ್ರತೆ ದಾಖಲು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 3.0 ದಾಖಲಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ತಿಳಿಸಿದೆ. ಭೂಮಿಯ 10 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರ ಪತ್ತೆಯಾಗಿರುವ ಮಾಹಿತಿ ಇದೆ.
ದೇವನಹಳ್ಳಿ, ಅಕ್ಟೋಬರ್ 23: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.0 ದಾಖಲಾಗಿದ್ದು, ಭೂಮಿಯ 10 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರ ಪತ್ತೆಯಾಗಿದೆ. ಭೂಕಂಪನದ ಕೇಂದ್ರದಿಂದ ಸುಮಾರು 20ರಿಂದ 30 ಕಿ.ಮೀ. ವ್ಯಾಪ್ತಿಯಲ್ಲಿ ಕಂಪನದ ಅನುಭವವಾಗಿರುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ತಿಳಿಸಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
