ECI Press Conference Live: ದೇಶಾದ್ಯಂತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಗ್ಗೆ ಚುನಾವಣಾ ಆಯೋಗ ಸುದ್ದಿಗೋಷ್ಠಿ

Updated on: Oct 27, 2025 | 4:33 PM

ಭಾರತೀಯ ಚುನಾವಣಾ ಆಯೋಗವು ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ದಿನಾಂಕಗಳನ್ನು ಘೋಷಿಸಲು ಪತ್ರಿಕಾಗೋಷ್ಠಿ ನಡೆಸುತ್ತಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸೇರಿದಂತೆ ಉನ್ನತ ಅಧಿಕಾರಿಗಳು ಭಾಗವಹಿಸಿದ್ದಾರೆ. ಹಂತ ಹಂತವಾಗಿ ನಡೆಯುವ ಈ ಪರಿಷ್ಕರಣೆಯ ಪ್ರಮುಖ ವಿವರಗಳನ್ನು ಆಯೋಗ ಪ್ರಕಟಿಸುತ್ತಿದೆ. ಮತದಾರರು ತಮ್ಮ ಹೆಸರನ್ನು ಪರಿಶೀಲಿಸಲು ಮತ್ತು ಹೊಸದಾಗಿ ನೋಂದಾಯಿಸಲು ಇದು ಪ್ರಮುಖ ಅವಕಾಶವಾಗಿದೆ.

ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ದಿನಾಂಕಗಳನ್ನು ಘೋಷಿಸಲು ಚುನಾವಣಾ ಆಯೋಗ ಪತ್ರಿಕಾಗೋಷ್ಠಿಯನ್ನು ನಡೆಸುತ್ತಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಚುನಾವಣಾ ಆಯುಕ್ತರಾದ ಸುಖ್​ಬೀರ್ ಸಿಂಗ್ ಸಂಧು ಹಾಗೂ ವಿವೇಕ್ ಜೋಶಿ ಈ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ. ದೇಶಾದ್ಯಂತ ಹಂತ ಹಂತವಾಗಿ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಸಲು ಭಾರತೀಯ ಚುನಾವಣಾ ಆಯೋಗವು ನಿರ್ಧರಿಸಿದ್ದು, ಇದೀಗ ಈ ಬಗ್ಗೆ ಪತ್ರಿಕಾಗೋಷ್ಠಿಯನ್ನು ನಡೆಸುತ್ತಿದೆ. ಲೈವ್​​​ ವಿಡಿಯೋ ಇಲ್ಲಿದೆ ನೋಡಿ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Published on: Oct 27, 2025 04:31 PM