ಆರ್ಥಿಕ ಪದ್ಧತಿಗಳು ನ್ಯಾಯಯುತವಾಗಿರಬೇಕು; ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಾಂಗ ಸಚಿವ ಜೈಶಂಕರ್

Updated on: Sep 08, 2025 | 10:39 PM

ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಅಂತರರಾಷ್ಟ್ರೀಯ ವ್ಯಾಪಾರ ವ್ಯವಸ್ಥೆಯ ಮುಕ್ತ, ನ್ಯಾಯಯುತ, ಪಾರದರ್ಶಕ ಮತ್ತು ತಾರತಮ್ಯರಹಿತ ವಿಧಾನದಂತಹ ಮೂಲಭೂತ ತತ್ವಗಳನ್ನು ರಕ್ಷಿಸಬೇಕು ಎಂದು ಭಾರತ ನಂಬುತ್ತದೆ ಎಂದು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದರು. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭಾಗವಹಿಸಿದ್ದ ವರ್ಚುವಲ್ ಬ್ರಿಕ್ಸ್ ಶೃಂಗಸಭೆಯಲ್ಲಿ ಮಾತನಾಡುತ್ತಾ ಅವರು ಈ ಹೇಳಿಕೆಗಳನ್ನು ನೀಡಿದರು.

ನವದೆಹಲಿ, ಸೆಪ್ಟೆಂಬರ್ 8:’ವ್ಯಾಪಾರಕ್ಕೆ ಅಡೆತಡೆಗಳನ್ನು ಹೇರುವುದರಿಂದ ಯಾವುದೇ ಪ್ರಯೋಜನವಿಲ್ಲ. ಬ್ರಿಕ್ಸ್ ರಾಷ್ಟ್ರಗಳು ಇಲ್ಲಿ ಒಂದು ಮಾದರಿಯನ್ನು ಸ್ಥಾಪಿಸಬೇಕು’ ಎಂದು ಕ್ಸಿ ಜಿನ್‌ಪಿಂಗ್ ಮತ್ತು ವ್ಲಾಡಿಮಿರ್ ಪುಟಿನ್ ಭಾಗವಹಿಸಿದ್ದ ಬ್ರಿಕ್ಸ್ ಸಭೆಯಲ್ಲಿ ಟ್ರಂಪ್ ಭಾರತದ ಮೇಲೆ ವಿಧಿಸಿದ ಸುಂಕಗಳನ್ನು ಉಲ್ಲೇಖಿಸಿ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ (Jaishankar) ಹೇಳಿದ್ದಾರೆ. ವ್ಯಾಪಾರ ಮತ್ತು ಹೂಡಿಕೆಗಾಗಿ ಜಗತ್ತು ಸ್ಥಿರ ವಾತಾವರಣವನ್ನು ಬಯಸುತ್ತಿರುವುದರಿಂದ ಆರ್ಥಿಕ ಪದ್ಧತಿಗಳು ನ್ಯಾಯಯುತ, ಪಾರದರ್ಶಕವಾಗಿರಬೇಕು. ಅದು ಎಲ್ಲರಿಗೂ ಪ್ರಯೋಜನವನ್ನು ನೀಡಬೇಕು ಎಂದು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಒತ್ತಿ ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ