ಸತೀಶ್ ಜಾರಕಿಹೊಳಿ ಮನೆ ಮೇಲೆ ರೇಡ್​ ಬೆನ್ನಲ್ಲೇ ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್

Edited By:

Updated on: Sep 12, 2026 | 9:11 PM

ಇ.ಡಿ. ನಿರ್ದೇಶಕ ರಾಹುಲ್ ನವೀನ್ ಬೆಂಗಳೂರಿಗೆ ಆಗಮಿಸಿದ್ದು, ಹಲವು ಮಹತ್ವದ ಇ.ಡಿ. ದಾಳಿ ಪ್ರಕರಣಗಳನ್ನು ಪರಿಶೀಲಿಸುವ ಸಾಧ್ಯತೆಯಿದೆ. ಮುಖ್ಯವಾಗಿ, ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ನಡೆದ ಇ.ಡಿ. ದಾಳಿ ಪ್ರಕರಣದ ತನಿಖೆಯ ಪ್ರಗತಿಯ ಕುರಿತು ಅವರು ಸಭೆ ನಡೆಸುವ ನಿರೀಕ್ಷೆಯಿದೆ.

ಬೆಂಗಳೂರು, ಸೆಪ್ಟೆಂಬರ್​ 12: ಕೆಪಿಎಸ್‌ಸಿ ನೇಮಕಾತಿ ಅಕ್ರಮ, ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲಿನ ಇಡಿ ದಾಳಿ, ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಗಳ ಪ್ರಗತಿ ಪರಿಶೀಲನೆಗೆ ಖುದ್ದು ಇ.ಡಿ ನಿರ್ದೇಶಕರೇ ಅಖಾಡಕ್ಕೆ ಇಳಿದಿದ್ದಾರೆ. ಇಡಿ ನಿರ್ದೇಶಕ ರಾಹುಲ್ ನವೀನ್ ಅವರು ನವದೆಹಲಿಯಿಂದ ಏರ್ ಇಂಡಿಯಾ ವಿಮಾನದ ಮೂಲಕ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ನಾಳೆಯಿಂದ ಎರಡು ರಾಜ್ಯದ ಪ್ರಕರಣಗಳ ಪ್ರಗತಿ ಪರಿಶೀಲನೆ ಮಾಡಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Sep 12, 2026 09:08 PM
Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More