ಐಟಿ ದಾಳಿಗಳಲ್ಲಿ ಬರಾಮತ್ತಾದ ಹಣ ಯಾರದೆಂದು ಈಡಿ ತನಿಖೆಯಿಂದ ಗೊತ್ತಾಗುತ್ತದೆ: ಬಿಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ
ಇನ್ನಾದರೂ ಸರ್ಕಾರ ರಾಜ್ಯದ ಅಭಿವೃದ್ಧಿ ಕಡೆ ಗಮನ ಹರಿಸಬೇಕಿದೆ ಎಂದರು. ಪ್ರಕರಣವನ್ನು ಇಡಿ ತನಿಖೆಗೆ ಒಪ್ಪಿಸುವ ಬಗ್ಗೆ ಕೇಳಿದಾಗ, ಇಂಥ ಪ್ರಕರಣಗಳನ್ನು ಕೇಂದ್ರೀಯ ಸಂಸ್ಥೆಗಳೇ ತನಿಖೆ ನಡೆಸುತ್ತವೆ ಮತ್ತು ಜಾರಿ ನಿರ್ದೇಶನಾಲಯದ ತನಿಖೆಯಿಂದಲೇ ಸತ್ಯ ಹೊರಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.
ಬೆಂಗಳೂರು: ಕಳೆದ ವಾರ ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಗಳಲ್ಲಿ (IT raids) ರೂ. 100 ಕೋಟಿ ಹೆಚ್ಚು ಹಣವನ್ನು ವಶಪಡಿಸಿಕೊಳ್ಳಲಾಗಿದೆ ಅದು ಯಾರಿಗೆ ಸೇರಿದ ಹಣ ಅಂತ ಗೊತ್ತಾಗಬೇಕಾದರೆ ಸೂಕ್ತವಾದ ತನಿಖೆ ನಡೆಯಬೇಕು ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ (BS Yediyurappa) ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಐದು ರಾಜ್ಯಗಳ ವಿಧಾನ ಸಭಾ ಚುನಾವಣೆಗಾಗಿ ಕಾಂಗ್ರೆಸ್ ಸರ್ಕಾರ ಸಂಗ್ರಹಿಸಿರುವ ಹಣ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು (Pralhad Joshi) ಹೇಳಿಕೆಯನ್ನು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆ ಮಾಡುವ ಬದಲು ಚುನಾವಣೆಗಾಗಿ ಭಾರೀ ಪ್ರಮಾಣದಲಲ್ಲಿ ಹಣ ಸಂಗ್ರಹಿಸುತ್ತಿರುವುದು ಖಂಡನೀಯ ಎಂದು ಹೇಳಿದ ಯಡಿಯೂರಪ್ಪ ಇನ್ನಾದರೂ ಸರ್ಕಾರ ರಾಜ್ಯದ ಅಭಿವೃದ್ಧಿ ಕಡೆ ಗಮನ ಹರಿಸಬೇಕಿದೆ ಎಂದರು. ಪ್ರಕರಣವನ್ನು ಇಡಿ ತನಿಖೆಗೆ ಒಪ್ಪಿಸುವ ಬಗ್ಗೆ ಕೇಳಿದಾಗ, ಇಂಥ ಪ್ರಕರಣಗಳನ್ನು ಕೇಂದ್ರೀಯ ಸಂಸ್ಥೆಗಳೇ ತನಿಖೆ ನಡೆಸುತ್ತವೆ ಮತ್ತು ಜಾರಿ ನಿರ್ದೇಶನಾಲಯದ ತನಿಖೆಯಿಂದಲೇ ಸತ್ಯ ಹೊರಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ