ಕಾಂಗ್ರೆಸ್ ಶಾಸಕ ಹ್ಯಾರಿಸ್, ಪುತ್ರ ನಲಪಾಡ್ ಮನೆ ಮೇಲೆ ಇ.ಡಿ ದಾಳಿ

Edited By:

Updated on: Apr 20, 2026 | 11:57 AM

ಕಾಂಗ್ರೆಸ್ ಶಾಸಕ ಎನ್ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ನಿವಾಸದ ಮೇಲೆ ಸೋಮವಾರ ಮುಂಜಾನೆ ಇ.ಡಿ ದಾಳಿ ನಡೆದಿದೆ. ಬಿಟ್‌ಕಾಯಿನ್ ಹಗರಣ ಸಂಬಂಧ ನಡೆದ ದಾಳಿ ಇದಾಗಿದ್ದು, ಹ್ಯಾಕರ್ ಶ್ರೀಕಿ ಜೊತೆ ನಲಪಾಡ್​​ಗೆ ನಂಟು ಇರುವ ಆರೋಪ ಕೇಳಿಬಂದಿದೆ. 4.5 ಕೋಟಿ ರೂ. ವ್ಯವಹಾರದ ಕುರಿತು ದಾಖಲೆಗಳ ಪರಿಶೀಲನೆ ನಡೆದಿದೆ.

ಬೆಂಗಳೂರು, ಏಪ್ರಿಲ್ 20: ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿದೆ. ಬೆಂಗಳೂರಿನ ಅಶೋಕನಗರದಲ್ಲಿರುವ ಹ್ಯಾರಿಸ್ ನಿವಾಸ ಹಾಗೂ ಮೊಹಮ್ಮದ್ ನಲಪಾಡ್ ಮನೆಯ ಮೇಲೆ ದಾಳಿ ನಡೆದಿದೆ. ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಇ.ಡಿ. ಅಧಿಕಾರಿಗಳು ಬೆಂಗಳೂರು ಸೇರಿದಂತೆ ಒಟ್ಟು 17 ಸ್ಥಳಗಳಲ್ಲಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮೊಹಮ್ಮದ್ ನಲಪಾಡ್ ಹ್ಯಾಕರ್ ಶ್ರೀಕಿ ಜೊತೆ ನಂಟು ಹೊಂದಿದ್ದ ಆರೋಪಗಳು ಈ ಹಿಂದೆ ಕೇಳಿಬಂದಿದ್ದವು. ಈ ನಂಟಿನ ಹಿನ್ನೆಲೆಯಲ್ಲೇ ಇ.ಡಿ. ದಾಳಿ ನಡೆಸಿದೆ ಎನ್ನಲಾಗಿದೆ. ಶ್ರೀಕಿ ಮತ್ತು ನಲಪಾಡ್ ನಡುವೆ 4.5 ಕೋಟಿ ರೂಪಾಯಿಗಳ ಅಕ್ರಮ ವ್ಯವಹಾರ ನಡೆದಿದೆ ಎಂದು ಇಡಿ ಈಗಾಗಲೇ ಆರೋಪಿಸಿದೆ. ಈ ಹಿಂದೆ ರಾಜ್ಯ ಸಿಐಡಿ ಕೂಡ ಬಿಟ್‌ಕಾಯಿನ್ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ಅವರನ್ನು ವಿಚಾರಣೆ ನಡೆಸಿತ್ತು. ಸದ್ಯ, ಇ.ಡಿ. ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 20, 2026 11:56 AM
Loading...
Unable to load recommendations.
Follow Us
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More