AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!

ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!

ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Apr 20, 2026 | 4:47 PM

Share

ಬಿಟ್‌ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಬೆಂಗಳೂರಿನಲ್ಲಿ ದಾಳಿ ನಡೆಸಿದೆ. ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ಕಾಂಗ್ರೆಸ್ ಶಾಸಕ ಎನ್​​ಎ ಹ್ಯಾರಿಸ್ ಹಾಗೂ ಪುತ್ರ ಮೊಹಮ್ಮದ್ ನಲಪಾಡ್ ಮಾತ್ರವಲ್ಲದೇ ಮಾಜಿ ಕೇಂದ್ರ ಸಚಿವ ಕೆ. ರೆಹಮಾನ್ ಖಾನ್ ಅವರ ಮೊಮ್ಮಗ ಮಹಮ್ಮದ್ ಹಕೀಬ್ ಖಾನ್ ಅವರ ನಿವಾಸಗಳ ಮೇಲೆ ಶೋಧ ಕಾರ್ಯಾಚರಣೆ ನಡೆದಿದೆ.

ಬೆಂಗಳೂರು, (ಏಪ್ರಿಲ್ 20): ಬಿಟ್‌ಕಾಯಿನ್ ಪ್ರಕರಣಕ್ಕೆ (bitcoin Case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಬೆಂಗಳೂರಿನಲ್ಲಿ ದಾಳಿ ನಡೆಸಿದೆ. ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ಕಾಂಗ್ರೆಸ್ ಶಾಸಕ ಎನ್​​ಎ ಹ್ಯಾರಿಸ್ ಹಾಗೂ ಪುತ್ರ ಮೊಹಮ್ಮದ್ ನಲಪಾಡ್ ಮಾತ್ರವಲ್ಲದೇ ಮಾಜಿ ಕೇಂದ್ರ ಸಚಿವ ಕೆ. ರೆಹಮಾನ್ ಖಾನ್ ಅವರ ಮೊಮ್ಮಗ ಮಹಮ್ಮದ್ ಹಕೀಬ್ ಖಾನ್ ಅವರ ನಿವಾಸಗಳ ಮೇಲೆ ಶೋಧ ಕಾರ್ಯಾಚರಣೆ ನಡೆದಿದೆ.

ಬೆಂಗಳೂರಿನ ಜಯನಗರದಲ್ಲಿರುವ ಕೆ.ರೆಹಮಾನ್ ಖಾನ್ ನಿವಾಸಕ್ಕೆ 2 ಇನೋವಾ ಕಾರುಗಳಲ್ಲಿ ಆಗಮಿಸಿರುವ ಇಡಿ ಅಧಿಕಾರಿಗಳ ತಂಡ, ಕಳೆದ ಆರು ಗಂಟೆಗಳಿಂದ ಪರಿಶೀಲನೆ ನಡೆಸಿದೆ. ಹಾಗೇ ಕೆ.ರೆಹಮಾನ್ ಖಾನ್ ಮೊಮ್ಮಗ ಮೊಹಮ್ಮದ್ ಹಕೀಬ್ ನನ್ನು ಸಹ ವಿಚಾರಣೆ ನಡೆಸಿದ್ದಾರೆ.

ಇದನ್ನೂ ನೋಡಿ: ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More