ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ

Updated By: Ganapathi Sharma

Updated on: May 22, 2025 | 12:04 PM

ಕರ್ನಾಟಕ ಗೃಹ ಸಚಿವ ಡಾ ಜಿ ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿರುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಇಂಥ ವಿಚಾರಗಳಲ್ಲಿ ಕೇಂದ್ರದ ವಿರುದ್ಧ ಒಗ್ಗಟ್ಟಿನಿಂದ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ. ಸೋನಿಯಾ ಗಾಂಧಿ ಕೇಸ್​​​ನಿಂದ ಹಿಡಿದು ಎಲ್ಲ ವಿಚಾರವಾಗಿ ಹೋರಾಟ ಮಾಡುತ್ತೇವೆ ಎಂದಿದ್ದಾರೆ.

ಬೆಂಗಳೂರು, ಮೇ 22: ಸಿದ್ಧಾರ್ಥ ಸಮೂಹ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿರುವುದನ್ನು ಖಂಡಿಸುತ್ತೇವೆ. ಇಂಥ ದಾಳಿಗಳನ್ನು ಖಂಡಿಸಿ ದೇಶಾದ್ಯಂತ ಹೋರಾಟ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೋನಿಯಾ ಗಾಂಧಿ ಕೇಸ್​​ನಿಂದ ಹಿಡಿದು ಎಲ್ಲ ವಿಚಾರವಾಗಿ ನಿತ್ಯ ಹೋರಾಟ ಮಾಡುತ್ತೇವೆ. ನಮಗೆ ನ್ಯಾಯಾಲಯದ ಬಗ್ಗೆ ನಂಬಿಕೆ ಇದೆ. ಚಾರಿಟೇಬಲ್​ ಟ್ರಸ್ಟ್​​ಗಳು ಸಾಕಷ್ಟು ನೆರವು ನೀಡುವ ಕೆಲಸ ಮಾಡುತ್ತಿವೆ. ಶಾಲಾ, ಕಾಲೇಜು ಫೀಸ್​​, ಮದುವೆ ಕಾರ್ಯಗಳಿಗೆ ನೆರವು ನೀಡಲಾಗುತ್ತದೆ. ಈ ರೀತಿಯ ಸಣ್ಣಪುಟ್ಟ ಚಾರಿಟಿ ನಡೆದಿರಬಹುದು, ಅದು ಇಲ್ಲ ಅಂತ ಹೇಳಲ್ಲ. ಮದುವೆ, ಆಸ್ಪತ್ರೆ ಬಿಲ್​​ನಂತಹ ಸಂದರ್ಭದಲ್ಲಿ ನೆರವಾಗಿರಬಹುದು. ಉಳಿದ ವಿಚಾರದ ಬಗ್ಗೆ ಏನು ಮಾಡುತ್ತಾರೋ ನೋಡೋಣ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ