ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿ: 2 ವರ್ಷದ ಹಿಂದೆ ಇದೇ ದಿನ ಬೆಳಗಾವಿಗೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು

Edited By:

Updated on: Sep 09, 2026 | 3:15 PM

ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿ ನಡೆದಿದೆ. ಬೆಂಗಳೂರು, ಬೆಳಗಾವಿಯ ಮನೆ ಕಚೇರಿಗಳ ಮೇಲೆ ಇಂದು (ಸೆಪ್ಟೆಂಬರ್ 09) ಇಡಿ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ. ಇನ್ನು ಕಾಕತಾಳಿಯ ಎಂಬಂತೆ ಕಳೆದ 2 ವರ್ಷದ ಹಿಂದೆ ಇದೇ ದಿನ ಬೆಳಗಾವಿಗೆ ಆಫ್ರಿಕಾದ ರುವಾಂಡಾ ಅಧಿಕಾರಿಗಳು ಭೇಟಿ ನೀಡಿದ್ದು, ಆಗ ಸತೀಶ್ ಜಾರಕಿಹೊಳಿ ಅವರು ತಮ್ಮ ಎರಡು ಶುಗರ್ ಫ್ಯಾಕ್ಟರಿಗಳನ್ನು ತೋರಿಸಿ ಹೂಡಿಕೆ ಬಗ್ಗೆ ಮಾತುಕತೆ ನಡೆಸಿದ್ದರು. ಅಲ್ಲದೇ ಜಾರಕಿಹೊಳಿ ಸಹ ಎರಡ್ಮೂರು ಬಾರಿ ರುವಾಂಡಾಕ್ಕೆ ಹೋಗಿಬಂದಿದ್ದರು. ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೀಗ ಇಡಿ ದಾಳಿಯಾಗಿದ್ದು, ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಬೆಳಗಾವಿ, (ಸೆಪ್ಟೆಂಬರ್ 09): ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿ ನಡೆದಿದೆ. ಬೆಂಗಳೂರು, ಬೆಳಗಾವಿಯ ಮನೆ ಕಚೇರಿಗಳ ಮೇಲೆ ಇಂದು (ಸೆಪ್ಟೆಂಬರ್ 09) ಇಡಿ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ. ಇನ್ನು ಕಾಕತಾಳಿಯ ಎಂಬಂತೆ ಕಳೆದ 2 ವರ್ಷದ ಹಿಂದೆ ಇದೇ ದಿನ ಬೆಳಗಾವಿಗೆ ಆಫ್ರಿಕಾದ ರುವಾಂಡಾ ಅಧಿಕಾರಿಗಳು ಭೇಟಿ ನೀಡಿದ್ದು, ಆಗ ಸತೀಶ್ ಜಾರಕಿಹೊಳಿ ಅವರು ತಮ್ಮ ಎರಡು ಶುಗರ್ ಫ್ಯಾಕ್ಟರಿಗಳನ್ನು ತೋರಿಸಿ ಹೂಡಿಕೆ ಬಗ್ಗೆ ಮಾತುಕತೆ ನಡೆಸಿದ್ದರು. ಅಲ್ಲದೇ ಜಾರಕಿಹೊಳಿ ಸಹ ಎರಡ್ಮೂರು ಬಾರಿ ರುವಾಂಡಾಕ್ಕೆ ಹೋಗಿಬಂದಿದ್ದರು. ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೀಗ ಇಡಿ ದಾಳಿಯಾಗಿದ್ದು, ಭಾರೀ ಸಂಚಲನಕ್ಕೆ ಕಾರಣವಾಗಿದೆ. ಸತೀಶ್ ಜಾರಕಿಹೊಳಿ ವಿದೇಶದಲ್ಲಿ ಹೂಡಿಕೆ ಮಾಡಿರುವ ಹಿನ್ನೆಲೆಯಲ್ಲಿ ಈ ದಾಳಿ ಆಯ್ತಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಇನ್ನು ಈ ಬಗ್ಗೆ ನಮ್ಮ ಬೆಳಗಾವಿಯ ಪ್ರತಿನಿಧಿ ಸಹದೇವ್ ಮಾನೆ ಅವರು ಹೆಚ್ಚಿನ ವಿವರ ನೀಡಿದ್ದಾರೆ ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More