ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ: ಇಂದೂ ಮುಂದುವರಿದ ತಪಾಸಣೆ

Edited By:

Updated on: Sep 10, 2026 | 8:02 AM

ಸಚಿವ ಸತೀಶ್ ಜಾರಕಿಹೊಳಿ ನಿವಾಸ ಮತ್ತು ಕಚೇರಿ ಸೇರಿದಂತೆ 18 ಸ್ಥಳಗಳ ಮೇಲೆ ಇಡಿ ದಾಳಿ ನಡೆಸಿದೆ. ವಿದೇಶದಲ್ಲಿ ಹಣ ಹೂಡಿಕೆ ಸಂಬಂಧ ಫೆಮಾ ಕಾಯ್ದೆ ಅಡಿ ಈ ತನಿಖೆ ನಡೆಯುತ್ತಿದೆ. 19 ಗಂಟೆಗಳ ಕಾಲ ಶೋಧ ಕಾರ್ಯ ನಡೆಸಲಾಗಿದ್ದು, ಹಲವು ಕಡತಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಧಿಕಾರಿಗಳು ಜಾರಕಿಹೊಳಿ ನಿವಾಸದಲ್ಲೇ ಮೊಕ್ಕಾಂ ಹೂಡಿದ್ದಾರೆ. ಇಂದೂ ಸಹ ದಾಳಿ ಮುಂದುವರಿದಿದೆ.

ಬೆಂಗಳೂರು, ಸೆಪ್ಟೆಂಬರ್ 10: ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ನಿವಾಸ ಮತ್ತು ಕಚೇರಿ ಸೇರಿದಂತೆ ರಾಜ್ಯದಾದ್ಯಂತ 18 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿರುವ ದಾಳಿ ಗುರುವಾರವೂ ಮುಂದುವರಿದಿದೆ. ವಿದೇಶದಲ್ಲಿ ಹಣ ಹೂಡಿಕೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಫೆಮಾ (ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ) ಕಾಯ್ದೆ ಅಡಿಯಲ್ಲಿ ಈ ದಾಳಿ ನಡೆದಿದೆ. ಬುಧವಾರ ಬೆಳಗ್ಗೆ 7 ಗಂಟೆಗೆ ಆರಂಭವಾದ ದಾಳಿ, ತಡರಾತ್ರಿ 2 ಗಂಟೆಯವರೆಗೆ ಸುಮಾರು 19 ಗಂಟೆಗಳ ಕಾಲ ನಿರಂತರವಾಗಿ ನಡೆಯಿತು. ಇಡಿ ಅಧಿಕಾರಿಗಳು ಜಾರಕಿಹೊಳಿ ಅವರ ನಿವಾಸದಲ್ಲೇ ಮೊಕ್ಕಾಂ ಹೂಡಿ, ಶೋಧ ಕಾರ್ಯ ನಡೆಸಿದರು. ಈ ವೇಳೆ ಹಲವು ಕಡತಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಜಾರಕಿಹೊಳಿ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ವಿದೇಶಿ ವಿನಿಮಯಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ಪಡೆದುಕೊಂಡಿದ್ದಾರೆ.

ಬೆಳಗಾವಿ, ಗೋವಾ ಮತ್ತು ಮಹಾರಾಷ್ಟ್ರ ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ದಾಳಿ ನಡೆದಿದ್ದು, ತನಿಖೆ ಮುಂದುವರಿದಿದೆ. ಎಲ್ಲಾ ಸ್ಥಳಗಳಲ್ಲಿ ದಾಳಿ ಅಂತ್ಯಗೊಂಡ ನಂತರ ಪಂಚನಾಮೆ ನಡೆಸಲಾಗುವುದು ಎಂದು ಇಡಿ ಮೂಲಗಳು ತಿಳಿಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us