ಸತೀಶ್ ಜಾರಕಿಹೊಳಿ ಆಪ್ತರು ಮತ್ತು ಸಂಬಂಧಿಕರಿಗೂ ಇಡಿ ಬಿಸಿ: ಪರಿಶೀಲನೆ ವೇಳೆ ಮಹತ್ವದ ದಾಖಲೆಗಳು ಪತ್ತೆ

Edited By:

Updated on: Sep 09, 2026 | 1:12 PM

ಸತೀಶ್ ಜಾರಕಿಹೊಳಿ ನಿವಾಸ, ಅವರ ಮಗಳು ಪ್ರಿಯಾಂಕಾ, ಪುತ್ರ ರಾಹುಲ್ ಹಾಗೂ ಬಾಮೈದ ವೈ. ಮಂಜುನಾಥ್ ಮನೆಗಳ ಮೇಲೆ ಇಡಿ ದಾಳಿ ನಡೆಸಿದೆ. ಆಪ್ತ ವೈದ್ಯ ಗಿರೀಶ್ ಸೋನಾಲ್ಕರ್, ರಾಜು ಧರಗಶೆಟ್ಟಿ, ವಿಠಲ್ ಪರ್ಸನ್ನ ನಿವಾಸಗಳ ಮೇಲೂ ಶೋಧ ನಡೆದಿದೆ. ರೇಡ್​​ ವೇಳೆ ವಿದೇಶಿ ಹೂಡಿಕೆ ಸಂಬಂಧ ಮಹತ್ವದ ಆಸ್ತಿ ಪತ್ರಗಳು ಸೇರಿ ಹಲವು ದಾಖಲೆಗಳು ಪತ್ತೆಯಾಗಿವೆ ಎನ್ನಲಾಗಿದೆ.

ಬೆಳಗಾವಿ, ಸೆಪ್ಟೆಂಬರ್​​ 09: ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಗೋಕಾಕ್ ಮತ್ತು ಬೆಳಗಾವಿ ಜಿಲ್ಲೆಯ ವಿವಿಧ ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಾರಕಿಹೊಳಿ ಅವರ ನಿವಾಸ, ಅವರ ಮಗಳು ಪ್ರಿಯಾಂಕಾ, ಪುತ್ರ ರಾಹುಲ್ ಹಾಗೂ ಬಾಮೈದ ವೈ. ಮಂಜುನಾಥ್ ಅವರ ಮನೆಗಳಲ್ಲಿಯೂ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಇದು ವೈ. ಮಂಜುನಾಥ್ ಅವರ ನಿವಾಸದ ಮೇಲಿನ ಎರಡನೇ ದಾಳಿಯಾಗಿದೆ. ರೇಡ್​​ ನಡೆದಿರುವ ಜಾಗಗಳಲ್ಲಿ ಜಾರಕಿಹೊಳಿ ಅವರ ಆಪ್ತ ವೈದ್ಯ ಗಿರೀಶ್ ಸೋನಾಲ್ಕರ್, ರಾಜು ಧರಗಶೆಟ್ಟಿ ಮತ್ತು ವಿಠಲ್ ಪರ್ಸನ್ನ ಅವರ ನಿವಾಸಗಳು ಸೇರಿವೆ. ಸಚಿವರ ಆಪ್ತರ ಮನೆಗಳಲ್ಲಿ ಪರಿಶೀಲನೆ ವೇಳೆ ಕೆಲ ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More