AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್

ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್

ರಾಚಪ್ಪಾಜಿ ನಾಯ್ಕ್
| Edited By: |

Updated on: Sep 09, 2026 | 8:59 AM

Share

ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ಮತ್ತು ಗೋಕಾಕ್ ನಿವಾಸಗಳ ಮೇಲೆ ಇಡಿ ದಾಳಿ ನಡೆದಿದೆ. ಈ ಹಿಂದೆ ಅವರ ಭಾವ ವೈ ಮಂಜುನಾಥ್ ಅವರ ಮೇಲೆ ನಡೆದ ದಾಳಿಯ ಮುಂದುವರಿದ ಭಾಗ ಇದಾಗಿದ್ದು, ಹವಾಲ, ಅಕ್ರಮ ಹಣ ಹಾಗೂ ಬಾರ್ ಲೈಸೆನ್ಸ್ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ದಾಳಿಯ ವೇಳೆ ಪತ್ತೆಯಾದ ಡೈರಿ ನಿರ್ಣಾಯಕವಾಗಬಹುದು ಎನ್ನಲಾಗಿದೆ.

ಬೆಂಗಳೂರು, ಸೆಪ್ಟೆಂಬರ್ 09: ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಡಬಲ್ ಶಾಕ್ ನೀಡಿದ್ದಾರೆ. ಬೆಳಗಿನ ಜಾವ 4 ಗಂಟೆಯಿಂದಲೇ ಪ್ಲಾನ್ ಮಾಡಿಕೊಂಡಿದ್ದ ಇಡಿ ಪಡೆ, ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಭದ್ರತಾ ಸಿಬ್ಬಂದಿಯೊಂದಿಗೆ ಏಕಾಏಕಿ ಬೆಂಗಳೂರಿನ ಡಾಲರ್ಸ್​ ಕಾಲೋನಿ ಮನೆಯಲ್ಲಿ ಶೋಧ ಕಾರ್ಯ ಆರಂಭಿಸಿದೆ. ಸುಮಾರು 18 ವಾಹನಗಳಲ್ಲಿ ಬಂದ 25ಕ್ಕೂ ಹೆಚ್ಚು ಅಧಿಕಾರಿಗಳ ತಂಡವು ಬೆಂಗಳೂರಿನ ಒಟ್ಟು ಆರು ಕಡೆಗಳಲ್ಲಿ ಹಾಗೂ ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿರುವ ಸಚಿವರ ನಿವಾಸ ಮತ್ತು ಕಚೇರಿಗಳ ಮೇಲೂ ದಾಳಿ ನಡೆಸಿದೆ. ಪ್ರಸ್ತುತ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿದ್ದು, ಅಧಿಕಾರಿಗಳು ಸ್ಥಳದಲ್ಲೇ ಸುದೀರ್ಘ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us