ED Raids Al-Falah University: ದೆಹಲಿ ಸ್ಫೋಟ ಪ್ರಕರಣ, ಹರಿಯಾಣದ ಅಲ್-ಫಲಾಹ್ಗೆ ಸಂಬಂಧಿಸಿದ 25 ಕಡೆ ಇಡಿ ದಾಳಿ
ದೆಹಲಿಯಲ್ಲಿ ನವೆಂಬರ್ 10ರಂದು ನಡೆದ ಕಾರು ಸ್ಫೋಟಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಇದೀಗ ಇಡಿ ಮಧ್ಯೆ ಪ್ರವೇಶಿಸಿದೆ. ಇಂದು ಈ ಘಟನೆಯೊಂದಿಗೆ ಸಂಬಂಧ ಹೊಂದಿದೆ ಎನ್ನಲಾದ ಅಲ್-ಫಲಾಹ್ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ 25 ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹರಿಯಾಣ ಮೂಲದ ಅಲ್-ಫಲಾಹ್ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಹಣಕಾಸಿನ ಜಾಲದ ಬಗ್ಗೆ ಇಡಿ ತನಿಖೆ ಆರಂಭಿಸಿದ್ದು, ದೆಹಲಿ-ಎನ್‌ಸಿಆರ್‌ನಲ್ಲಿ ಕನಿಷ್ಠ 25 ಸ್ಥಳಗಳ ಮೇಲೆ ದಾಳಿ ಮಾಡಿದೆ.
ಹರಿಯಾಣ, ನವೆಂಬರ್ 16:ದೆಹಲಿಯಲ್ಲಿ ನವೆಂಬರ್ 10ರಂದು ನಡೆದ ಕಾರು ಸ್ಫೋಟಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಇದೀಗ ಇಡಿ ಮಧ್ಯೆ ಪ್ರವೇಶಿಸಿದೆ. ಇಂದು ಈ ಘಟನೆಯೊಂದಿಗೆ ಸಂಬಂಧ ಹೊಂದಿದೆ ಎನ್ನಲಾದ ಅಲ್-ಫಲಾಹ್ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ 25 ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹರಿಯಾಣ ಮೂಲದ ಅಲ್-ಫಲಾಹ್ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಹಣಕಾಸಿನ ಜಾಲದ ಬಗ್ಗೆ ಇಡಿ ತನಿಖೆ ಆರಂಭಿಸಿದ್ದು, ದೆಹಲಿ-ಎನ್‌ಸಿಆರ್‌ನಲ್ಲಿ ಕನಿಷ್ಠ 25 ಸ್ಥಳಗಳ ಮೇಲೆ ದಾಳಿ ಮಾಡಿದೆ.
ಬೆಳಗ್ಗೆ 5 ಗಂಟೆಗೆ ಪ್ರಾರಂಭವಾದ ದಾಳಿಯು ವಿಶ್ವವಿದ್ಯಾಲಯದ ಟ್ರಸ್ಟಿಗಳು ಮತ್ತು ಸಂಬಂಧಿತ ವ್ಯಕ್ತಿಗಳಿಗೆ ಸಂಬಂಧಿಸಿದ ಜಾಗಗಳ ಮೇಲೆ ದಾಳಿ ನಡೆಯುತ್ತಿದೆ. ಬಂಧಿತ ಹಲವಾರು ಶಂಕಿತರು ವಿಶ್ವವಿದ್ಯಾಲಯದೊಂದಿಗೆ ನೇರ ಸಂಪರ್ಕವನ್ನು ಹೊಂದಿರುವುದು ದೃಢಪಟ್ಟಿದೆ.
ನವೆಂಬರ್ 10 ರಂದು ಕೆಂಪು ಕೋಟೆಯ ಬಳಿ ನಡೆದ ಕಾರ್ ಬಾಂಬ್ ದಾಳಿಯಲ್ಲಿ 115 ಜನರು ಸಾವನ್ನಪ್ಪಿದ್ದರು. ಹಲವಾರು ಶಂಕಿತರು ಈ ವಿಶ್ವವಿದ್ಯಾಲಯದೊಂದಿಗೆ ಸಂಪರ್ಕ ಹೊಂದಿದ್ದಾರೆ. ದೆಹಲಿ ಬಾಂಬ್ ದಾಳಿಯ ಪ್ರಮುಖ ಆರೋಪಿ ಡಾ. ಉಮರ್ ಉನ್ ನಬಿ ಅಲ್-ಫಲಾಹ್ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದ.
ವಿಶ್ವವಿದ್ಯಾಲಯದೊಂದಿಗೆ ಸಂಪರ್ಕ ಹೊಂದಿರುವ ಶಂಕೆಯ ಮೇಲೆ ಹಲವಾರು ಇತರ ವೈದ್ಯರನ್ನು ಸಹ ಬಂಧಿಸಲಾಗಿದೆ. ವಿಶ್ವವಿದ್ಯಾಲಯವು ತನಿಖೆಯ ಕೇಂದ್ರಬಿಂದುವಾಗಿದೆ. ನವೆಂಬರ್ 13 ರಂದು, ವಿಶ್ವವಿದ್ಯಾಲಯವು ಮಾನ್ಯತೆ ಪಡೆದಿಲ್ಲ ಅಥವಾ ಮಾನ್ಯತೆಗಾಗಿ ಅರ್ಜಿ ಸಲ್ಲಿಸಿಲ್ಲದ ಕಾರಣ ಅದಕ್ಕೆ ಶೋ-ಕಾಸ್ ನೋಟಿಸ್ ನೀಡಲಾಯಿತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

