ಚಿತ್ರದುರ್ಗ ಕೈ ಶಾಸಕನ ಚಿನ್ನದ ಖಜಾನೆ ನೋಡಿ ಶಾಕ್: ಬರೋಬ್ಬರಿ 2 ಚೀಲದಲ್ಲಿ ತುಂಬಿಕೊಂಡ ಹೋದ ಇಡಿ
ಆನ್‌ಲೈನ್ ಬೆಟ್ಟಿಂಗ್ ಹಾಗೂ ಮನಿ ಗೇಮಿಂಗ್ ಹಗರಣದಲ್ಲಿ (Veerendra Puppy) ಬಂಧನದಲ್ಲಿರುವ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)ಗೆ ಇಡಿ ಮತ್ತೆ ಶಾಕ್ ನೀಡಿದೆ. ಶಾಸಕರಿಗೆ ಸೇರಿದ ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ನಿನ್ನೆ 3ನೇ ಸಲ ದಾಳಿ ಮಾಡಿದ್ದು, ಲಾಕರ್ ನಲ್ಲಿದ್ದವು ಎನ್ನಲಾದ ಅಮೂಲ್ಯ ವಸ್ತುಗಳಿದ್ದ 2 ಬಟ್ಟೆ ಚೀಲಗಳನ್ನು ತೆಗೆದು ಕೊಂಡು ಹೋಗಿದೆ ಎಂದು ತಿಳಿದುಬಂದಿದೆ.
ಚಿತ್ರದುರ್ಗ, (ಸೆಪ್ಟೆಂಬರ್ 07): ಆನ್‌ಲೈನ್ ಬೆಟ್ಟಿಂಗ್ ಹಾಗೂ ಮನಿ ಗೇಮಿಂಗ್ ಹಗರಣದಲ್ಲಿ (Veerendra Puppy) ಬಂಧನದಲ್ಲಿರುವ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)ಗೆ ಇಡಿ ಮತ್ತೆ ಶಾಕ್ ನೀಡಿದೆ. ಶಾಸಕರಿಗೆ ಸೇರಿದ ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ನಿನ್ನೆ 3ನೇ ಸಲ ದಾಳಿ ಮಾಡಿದ್ದು, ಲಾಕರ್ ನಲ್ಲಿದ್ದವು ಎನ್ನಲಾದ ಅಮೂಲ್ಯ ವಸ್ತುಗಳಿದ್ದ 2 ಬಟ್ಟೆ ಚೀಲಗಳನ್ನು ತೆಗೆದು ಕೊಂಡು ಹೋಗಿದೆ ಎಂದು ತಿಳಿದುಬಂದಿದೆ. ಮೂಟೆಯಲ್ಲಿ ಚಿನ್ನ ಇತ್ತೋ ಅಥವಾ ದಾಖಲೆಗಳಿದ್ದವೋ ಎನ್ನುವುದು ಇನ್ನಷ್ಟೇ ಖಚಿತವಾಗಬೇಕಿದೆ. ಆದಾಗ್ಯೂ ಲಾಕರ್‌ಗಳಲ್ಲಿ ಚಿನ್ನ ಸಿಕ್ಕಿರುವುದನ್ನು ಬಲ್ಲ ಮೂಲಗಳು ಖಚಿತಪಡಿಸಿವೆ. ಈ ಬಗ್ಗೆ ಇಡಿ ಅಧಿಕೃತ ಮಾಹಿತಿ ತಿಳಿಸಬೇಕಿದೆ.
