ಕಾಂಗ್ರೆಸ್ ನಾಯಕಿ ಕುಸುಮ ಹನುಮಂತರಾಯಪ್ಪ ಮನೆ ಮೇಲೂ ಈಡಿ ದಾಳಿ, ದಾಖಲೆ ಪರಿಶೀಲನೆ
ಈಗಾಗಲೇ ನಾವು ವರದಿ ಮಾಡುರುವ ಹಾಗೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆಸಿ ವಿರೇಂದ್ರ ಪಪ್ಪಿ ಮತ್ತು ಅವರ ಸಹೋದರನ ಮನೆಗಳ ಮೇಲೆ ಈಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 40 ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ತಂಡಗಳ ಭಾಗವಾಗಿದ್ದು ಚಳ್ಳಕೆರೆ, ಬೆಂಗಳೂರು, ಗೋವಾ ಸೇರಿ ಒಟ್ಟು 17 ಕಡೆಗಳಲ್ಲಿ ದಾಳಿ ನಡೆದಿದೆ. ವಿರೇಂದ್ರ ಮತ್ತು ಕುಸುಮ ಕುಟುಂಬಸ್ಥರ ಫೋನ್ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು, ಆಗಸ್ಟ್ 22: ಕಾಂಗ್ರೆಸ್ ಪಕ್ಷದ ಕೆಲ ನಾಯಕರಿಗೆ ಇಂದು ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ (Enforcement Directorate) ಅಧಿಕಾರಿಗಳು ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸುವ ಮೂಲಕ ಆಘಾತ ನೀಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಕುಸುಮ ಅವರ ಮುದ್ದಿಪಾಳ್ಯ ರಸ್ತೆಯಲ್ಲಿರುವ ಮನೆಮೇಲೆ ಈಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಅಧಿಕಾರಿಗಳಿಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಚಿತ್ರದುರ್ಗ ಶಾಸಕ ಕೆಸಿ ವಿರೇಂದ್ರ ಪಪ್ಪಿ ಅವರ ವ್ಯಾಪಾರಗಳಲ್ಲಿ ಕುಸುಮ ಅವರ ಸಹೋದರ ಭಾಗಿಯಾಗಿದ್ದಾರೆ, ಹಾಗಾಗೇ ಬೆಳಗಿನ ಜಾವ 4.30 ಕ್ಕೆ 2 ಕಾರುಗಳಲ್ಲಿ ಬಂದಿರುವ ಅಧಿಕಾರಿಗಳು ಕುಸುಮ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಸಂಸದ, ಶಾಸಕರ ಮನೆಗಳ ಮೇಲೆ ಇಡಿ ದಾಳಿ ವಿಚಾರ: ಸಿಎಂ ಸೇರಿ ಯಾರೆಲ್ಲಾ ಏನಂದ್ರು?
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

