SSLC ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಇಲಾಖೆ ಹೊಸ ಪ್ಲಾನ್; ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
ಮುಂಬರುವ ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಉತ್ತಮವಾಗಿ ಸಿದ್ಧರಾಗಲು, ಪ್ರತಿ ಮನೆಯಲ್ಲಿ ಪ್ರತಿದಿನ ಸಂಜೆ 7 ರಿಂದ 9 ರವರೆಗೆ ಮೊಬೈಲ್ ಮತ್ತು ಟಿವಿಗಳನ್ನು ಸಂಪೂರ್ಣವಾಗಿ ಸ್ವಿಚ್ ಆಫ್ ಮಾಡುವಂತೆ ಶಿಕ್ಷಣ ಇಲಾಖೆಯು ಸುತ್ತೋಲೆ ಹೊರಡಿಸಿದೆ. ಈ ಅವಧಿಯಲ್ಲಿ ಮಕ್ಕಳು ಅಧ್ಯಯನಕ್ಕೆ ಹೆಚ್ಚಿನ ಗಮನ ನೀಡಲು ಪ್ರೇರೇಪಿಸುವುದು ಇದರ ಹಿಂದಿನ ಉದ್ದೇಶವಾಗಿದೆ. ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್ಎಸ್ಎಲ್ಸಿಯಲ್ಲಿ ಉತ್ತಮ ಅಂಕ ಗಳಿಸಲು ಇದು ಸಹಾಯಕವಾಗಲಿದೆ ಎಂದು ಇಲಾಖೆ ತಿಳಿಸಿದೆ. ಸರ್ಕಾರದ ಈ ಆದೇಶವನ್ನು ಕೆಲವು ವಿದ್ಯಾರ್ಥಿಗಳು ಸ್ವಾಗತಿಸಿದ್ದು, ಇದು ಓದಿಗೆ ಸಹಾಯಕವಾಗಲಿದೆ ಎಂದಿದ್ದಾರೆ. ಆದರೆ, ಪೋಷಕರು ಈ ನಿಯಮವನ್ನು ಎಷ್ಟು ಪಾಲಿಸುತ್ತಾರೆ ಎಂಬುದು ಯಕ್ಷಪ್ರಶ್ನೆಯಾಗಿದೆ.
ಬೆಂಗಳೂರು, ಫೆಬ್ರುವರಿ 04: ಎಸ್ಎಸ್ಎಲ್ಸಿ (SSLC) ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆ, ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಫಲಿತಾಂಶಗಳನ್ನು ಸುಧಾರಿಸಲು ಮಹತ್ವದ ಉಪಕ್ರಮ ಕೈಗೊಂಡಿದೆ. ಇದಕ್ಕಾಗಿ ಮನೆಗೆ ತೆರಳಿ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಈ ಅಭಿಯಾನದಡಿ, ಶಿಕ್ಷಕರು ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ಪೋಷಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಮುಂಬರುವ ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಉತ್ತಮವಾಗಿ ಸಿದ್ಧರಾಗಲು, ಪ್ರತಿ ಮನೆಯಲ್ಲಿ ಪ್ರತಿದಿನ ಸಂಜೆ 7 ರಿಂದ 9 ರವರೆಗೆ ಮೊಬೈಲ್ ಮತ್ತು ಟಿವಿಗಳನ್ನು ಸಂಪೂರ್ಣವಾಗಿ ಸ್ವಿಚ್ ಆಫ್ ಮಾಡುವಂತೆ ಶಿಕ್ಷಣ ಇಲಾಖೆಯು ಸುತ್ತೋಲೆ ಹೊರಡಿಸಿದೆ. ಈ ಅವಧಿಯಲ್ಲಿ ಮಕ್ಕಳು ಅಧ್ಯಯನಕ್ಕೆ ಹೆಚ್ಚಿನ ಗಮನ ನೀಡಲು ಪ್ರೇರೇಪಿಸುವುದು ಇದರ ಹಿಂದಿನ ಉದ್ದೇಶವಾಗಿದೆ. ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್ಎಸ್ಎಲ್ಸಿಯಲ್ಲಿ ಉತ್ತಮ ಅಂಕ ಗಳಿಸಲು ಇದು ಸಹಾಯಕವಾಗಲಿದೆ ಎಂದು ಇಲಾಖೆ ತಿಳಿಸಿದೆ. ಸರ್ಕಾರದ ಈ ಆದೇಶವನ್ನು ಕೆಲವು ವಿದ್ಯಾರ್ಥಿಗಳು ಸ್ವಾಗತಿಸಿದ್ದು, ಇದು ಓದಿಗೆ ಸಹಾಯಕವಾಗಲಿದೆ ಎಂದಿದ್ದಾರೆ. ಆದರೆ, ಪೋಷಕರು ಈ ನಿಯಮವನ್ನು ಎಷ್ಟು ಪಾಲಿಸುತ್ತಾರೆ ಎಂಬುದು ಯಕ್ಷಪ್ರಶ್ನೆಯಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್