SSLC ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಇಲಾಖೆ ಹೊಸ ಪ್ಲಾನ್; ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!

Updated on: Feb 04, 2026 | 11:38 AM

ಮುಂಬರುವ ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಉತ್ತಮವಾಗಿ ಸಿದ್ಧರಾಗಲು, ಪ್ರತಿ ಮನೆಯಲ್ಲಿ ಪ್ರತಿದಿನ ಸಂಜೆ 7 ರಿಂದ 9 ರವರೆಗೆ ಮೊಬೈಲ್ ಮತ್ತು ಟಿವಿಗಳನ್ನು ಸಂಪೂರ್ಣವಾಗಿ ಸ್ವಿಚ್ ಆಫ್ ಮಾಡುವಂತೆ ಶಿಕ್ಷಣ ಇಲಾಖೆಯು ಸುತ್ತೋಲೆ ಹೊರಡಿಸಿದೆ. ಈ ಅವಧಿಯಲ್ಲಿ ಮಕ್ಕಳು ಅಧ್ಯಯನಕ್ಕೆ ಹೆಚ್ಚಿನ ಗಮನ ನೀಡಲು ಪ್ರೇರೇಪಿಸುವುದು ಇದರ ಹಿಂದಿನ ಉದ್ದೇಶವಾಗಿದೆ. ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್ಎಸ್ಎಲ್ಸಿಯಲ್ಲಿ ಉತ್ತಮ ಅಂಕ ಗಳಿಸಲು ಇದು ಸಹಾಯಕವಾಗಲಿದೆ ಎಂದು ಇಲಾಖೆ ತಿಳಿಸಿದೆ. ಸರ್ಕಾರದ ಈ ಆದೇಶವನ್ನು ಕೆಲವು ವಿದ್ಯಾರ್ಥಿಗಳು ಸ್ವಾಗತಿಸಿದ್ದು, ಇದು ಓದಿಗೆ ಸಹಾಯಕವಾಗಲಿದೆ ಎಂದಿದ್ದಾರೆ. ಆದರೆ, ಪೋಷಕರು ಈ ನಿಯಮವನ್ನು ಎಷ್ಟು ಪಾಲಿಸುತ್ತಾರೆ ಎಂಬುದು ಯಕ್ಷಪ್ರಶ್ನೆಯಾಗಿದೆ.

ಬೆಂಗಳೂರು, ಫೆಬ್ರುವರಿ 04: ಎಸ್ಎಸ್ಎಲ್ಸಿ  (SSLC) ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆ, ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಫಲಿತಾಂಶಗಳನ್ನು ಸುಧಾರಿಸಲು ಮಹತ್ವದ ಉಪಕ್ರಮ ಕೈಗೊಂಡಿದೆ. ಇದಕ್ಕಾಗಿ ಮನೆಗೆ ತೆರಳಿ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಈ ಅಭಿಯಾನದಡಿ, ಶಿಕ್ಷಕರು ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ಪೋಷಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಮುಂಬರುವ ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಉತ್ತಮವಾಗಿ ಸಿದ್ಧರಾಗಲು, ಪ್ರತಿ ಮನೆಯಲ್ಲಿ ಪ್ರತಿದಿನ ಸಂಜೆ 7 ರಿಂದ 9 ರವರೆಗೆ ಮೊಬೈಲ್ ಮತ್ತು ಟಿವಿಗಳನ್ನು ಸಂಪೂರ್ಣವಾಗಿ ಸ್ವಿಚ್ ಆಫ್ ಮಾಡುವಂತೆ ಶಿಕ್ಷಣ ಇಲಾಖೆಯು ಸುತ್ತೋಲೆ ಹೊರಡಿಸಿದೆ. ಈ ಅವಧಿಯಲ್ಲಿ ಮಕ್ಕಳು ಅಧ್ಯಯನಕ್ಕೆ ಹೆಚ್ಚಿನ ಗಮನ ನೀಡಲು ಪ್ರೇರೇಪಿಸುವುದು ಇದರ ಹಿಂದಿನ ಉದ್ದೇಶವಾಗಿದೆ. ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್ಎಸ್ಎಲ್ಸಿಯಲ್ಲಿ ಉತ್ತಮ ಅಂಕ ಗಳಿಸಲು ಇದು ಸಹಾಯಕವಾಗಲಿದೆ ಎಂದು ಇಲಾಖೆ ತಿಳಿಸಿದೆ. ಸರ್ಕಾರದ ಈ ಆದೇಶವನ್ನು ಕೆಲವು ವಿದ್ಯಾರ್ಥಿಗಳು ಸ್ವಾಗತಿಸಿದ್ದು, ಇದು ಓದಿಗೆ ಸಹಾಯಕವಾಗಲಿದೆ ಎಂದಿದ್ದಾರೆ. ಆದರೆ, ಪೋಷಕರು ಈ ನಿಯಮವನ್ನು ಎಷ್ಟು ಪಾಲಿಸುತ್ತಾರೆ ಎಂಬುದು ಯಕ್ಷಪ್ರಶ್ನೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More