ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ
12 ಸಾವಿರ ಶಿಕ್ಷಕರನ್ನು ನೂತನವಾಗಿ ನಿಯೋಜಿಸಲಾಗುತ್ತಿದೆ. ಯಾವುದೇ ಶಿಕ್ಷಕರ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಮೋಷನ್‌ಗಳಿಂದ ಖಾಲಿ ಆಗುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಮುಂದಿನ ಶೈಕ್ಷಣಿಕ ವರ್ಷದೊಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.
ಶಿವಮೊಗ್ಗ, ನವೆಂಬರ್ 29: ಸರ್ಕಾರಿ ಶಾಲೆಗಳಿಗೆ 12 ಸಾವಿರ ಮತ್ತು ಅನುದಾನಿತ ಶಾಲೆಗಳಿಗೆ 6 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮಕ್ಕಳ ಸ್ವಾಗತಕ್ಕೆ ಈ ಶಿಕ್ಷಕರೇ ಉಪಸ್ಥಿತರಿರುತ್ತಾರೆ. ನಾವು ಒಟ್ಟು 32 ಸಾವಿರ ಶಿಕ್ಷಕರ ನೇಮಕ ಮಾಡಿದ ಹಾಗೆ ಆಗುತ್ತದೆ. ಹಿಂದಿನ ಸರ್ಕಾರದವರು ಕೇವಲ 5 ಸಾವಿರದೊಳಗೆ ಶಿಕ್ಷಕರ ನೇಮಕಾತಿ ಮಾಡಿದ್ದರು. ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಕರ ನೇಮಕಾತಿ ಆದಷ್ಟು ಬೇಗನೆ ಮುಗಿಯಲಿದೆ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
