NTA ಉನ್ನತ ಅಧಿಕಾರಿಗಳ ಜತೆ ಜೋಶಿ ಸಭೆ: ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಸೂಚನೆ

Updated on: Aug 09, 2026 | 7:24 PM

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಬಳಿಕ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದ್ದು, ಬಿಗಿ ಕ್ರಮಗಳನ್ನು ಕೈಗೊಂಡಿದೆ. ಇದಕ್ಕೆ ಪೂರಕವೆಂಬಂತೆ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅವರು ಇಂದು (ಆಗಸ್ಟ್ 09) ನವದೆಹಲಿಯಲ್ಲಿ NTA ಉನ್ನತ ಅಧಿಕಾರಿಗಳ ಜತೆ ಸಭೆ ನಡೆಸಿದರು. ಸಭೆಯಲ್ಲಿ ಪರೀಕ್ಷಾ ಪ್ರಕ್ರಿಯೆ ಸರಳೀಕರಣಗೊಳಿಸುವ ಕುರಿತು ಸುದೀರ್ಘ ಚರ್ಚೆ ಮಾಡಿದ್ದಾರೆ

ನವದೆಹಲಿ, (ಆಗಸ್ಟ್ 09): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಬಳಿಕ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದ್ದು, ಬಿಗಿ ಕ್ರಮಗಳನ್ನು ಕೈಗೊಂಡಿದೆ. ಇದಕ್ಕೆ ಪೂರಕವೆಂಬಂತೆ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅವರು ಇಂದು (ಆಗಸ್ಟ್ 09) ನವದೆಹಲಿಯಲ್ಲಿ NTA ಉನ್ನತ ಅಧಿಕಾರಿಗಳ ಜತೆ ಸಭೆ ನಡೆಸಿದರು. ಸಭೆಯಲ್ಲಿ ಪರೀಕ್ಷಾ ಪ್ರಕ್ರಿಯೆ ಸರಳೀಕರಣಗೊಳಿಸುವ ಕುರಿತು ಸುದೀರ್ಘ ಚರ್ಚೆ ಮಾಡಿದ್ದಾರೆ. ಅಲ್ಲದೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯನ್ನು ಮತ್ತಷ್ಟು ಬಲಪಡಿಸುವಂತೆ. ವಿದ್ಯಾರ್ಥಿಗಳ ದೂರುಗಳಿಗೆ ತಕ್ಷಣವೇ ಸ್ಪಂದಿಸಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆಗಳನ್ನು ಆಲಿಸಬೇಕು. ಇದರ ಜೊತೆಗೆ ಪಾರದರ್ಶಕ ಮತ್ತು ವಿಶ್ವಾಸಾರ್ಹತೆ ಮತ್ತಷ್ಟು ಹೆಚ್ಚಿಸುವಂತೆ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More