ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ವಿರಾಟ್ ಕೊಹ್ಲಿಯನ್ನು ಬಲಿಪಶು ಮಾಡುವ ಹುನ್ನಾರ ನಡೆದಿದೆ: ಅನುಪಮಾ ಶೆಣೈ, ಮಾಜಿ ಡಿವೈಎಸ್ಪಿ

ಅರುಣ್​ ಕುಮಾರ್​ ಬೆಳ್ಳಿ

Updated on: Jul 19, 2025 | 5:16 PM

ಬೆಂಗಳೂರು ಮೂಲದ ಕಳ್ಳ ಸಾಗಾಣಿಕೆದಾರರ ಮಾಫಿಯಾವೊಂದು ನಗರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ಗಲಭೆ ನಡೆಸಿದ ದುಷ್ಟರ ಗುಂಪನ್ನು ಬಳಸಿಕೊಂಡು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದ ಪ್ರಕರಣ ಸಂಭವಿಸುವಂತೆ ಮಾಡಿದರು ಅಂತ ಪ್ರಕರಣದ ನ್ಯಾಯಾಂಗ ತನಿಖೆ ನಡೆಸುತ್ತಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರಿಗೆ ತಾನು 8-ಪುಟಗಳ ಪತ್ರ ಬರೆದಿದ್ದೇನೆ ಎಂದು ಅನುಪಮಾ ಶೆಣೈ ಹೇಳಿದರು.

ಉಡುಪಿ, ಜುಲೈ 19: ಜೂನ್ 4 ರಂದು ಬೆಂಗಳೂರಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ರಾಜ್ಯ ಉಚ್ಚ ನ್ಯಾಯಲಯಕ್ಕೆ ವರದಿಯೊಂದನ್ನು ಸಲ್ಲಿಸಿದ್ದು ಆ ವರದಿಯನ್ನು ಸಾರ್ವಜನಿಕಗೊಳಿಸಬೇಕೆಂದು ನ್ಯಾಯಾಲಯವು ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ಮಾಜಿ ಡಿವೈಎಸ್​ಪಿ ಅನುಪಮಾ ಶೆಣೈ (Anupama Shenoy, former DySP) ಹೇಳಿದರು. ಮಾಧ್ಯಮಗಳೊಂದಿಗೆ ಮಾತಾಡಿದ ಅನುಪಮಾ, ಸರ್ಕಾರದ ವರದಿಯನ್ನು ಪರಿಶೀಲಿಸಿದ್ದೇಯಾದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯನ್ನು ಬಲಿಪಶು ಮಾಡುವ ಹುನ್ನಾರ ನಡೆದಿರುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ, ಅದರೆ ಜನ ಸ್ಟೇಡಿಯಂ ಮತ್ತು ವಿಧಾನ ಸೌಧದ ಬಳಿ ಆರ್​​ಸಿಬಿಯ ಟ್ವೀಟ್ ನೋಡಿ ಬಂದಿದ್ರಾ ಅನ್ನೋದು ಮುಖ್ಯ ಪ್ರಶ್ನೆಯಾಗುತ್ತದೆ ಮತ್ತು ಸಿದ್ದರಾಮಯ್ಯ ಈ ಪ್ರಶ್ನೆಗೆ ಉತ್ತರ ನೀಡಬೇಕು ಎಂದು ಶೆಣೈ ಹೇಳಿದರು.

ಇದನ್ನೂ ಓದಿ:  ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತಕ್ಕೆ ಕಾರಣ ಬಹಿರಂಗ: ಕುನ್ಹಾ ಸಲ್ಲಿಸಿದ ವರದಿಯಲ್ಲಿದೆ ಸ್ಫೋಟಕ ಅಂಶ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.