AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಪುಣ್ಯೇಶ್ ಬಂಧನ, ಮುಂದುವರಿದ ತನಿಖೆ

BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಪುಣ್ಯೇಶ್ ಬಂಧನ, ಮುಂದುವರಿದ ತನಿಖೆ

ಶಿವಪ್ರಸಾದ್​ ಬಿ.
| Edited By: |

Updated on: Jul 23, 2026 | 11:34 AM

Share

ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣ್ಯೇಶ್ ಎಂಬಾತನನ್ನು ಬಂಧಿಸಲಾಗಿದೆ. ಪೊಲೀಸರು ಆರೋಪಿಯ ವಿಚಾರಣೆ ನಡೆಸುತ್ತಿದ್ದು, ಇದೊಂದು ಪೂರ್ವ ನಿಯೋಜಿತ ಕೃತ್ಯವೇ ಎಂಬ ಬಗ್ಗೆ ತನಿಖೆ ನಡೆಸಿದ್ದಾರೆ. ನಿನ್ನೆ ಬಿಜೆಪಿಗರಿಂದ ಕಾಂಗ್ರೆಸ್​​ ಕಚೇರಿ ಮುತ್ತಿಗೆ ಯತ್ನದ ವೇಳೆ ಭಾರಿ ಹೈಡ್ರಾಮಾ ನಡೆದಿತ್ತು.

ಬೆಂಗಳೂರು, ಜುಲೈ 23: ಯುವ ಕಾಂಗ್ರೆಸ್​​ ಕಾರ್ಯಕರ್ತರ ಪ್ರತಿಭಟನೆಗೆ ಕೌಂಟರ್​​ ಆಗಿ ಕಾಂಗ್ರೆಸ್​​ ಕಚೇರಿ ಬಳಿ ಬಿಜೆಪಿಗರ ಪ್ರೊಟೆಸ್ಟ್​​ ವೇಳೆ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಪುಣ್ಯೇಶ್ ಎಂಬಾತನನ್ನು ಬಂಧಿಸಿದ್ದಾರೆ. ಬೆಂಗಳೂರಿನ ಶಿವಾಜಿನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು ತಡರಾತ್ರಿಯವರೆಗೂ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ, ಪುಣ್ಯೇಶ್ ಒಂದು ಬಾಕ್ಸ್‌ನಲ್ಲಿ ಮೊಟ್ಟೆಗಳನ್ನು ತಂದಿದ್ದ ಎಂದು ತಿಳಿದುಬಂದಿದೆ. ಈ ಕೃತ್ಯದಲ್ಲಿ ಪುಣ್ಯೇಶ್ ಜೊತೆ ಇನ್ನೂ ಕೆಲವರು ಭಾಗಿಯಾಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಮೊಟ್ಟೆಗಳನ್ನು ಎಲ್ಲಿಂದ ತರಲಾಯಿತು, ಮೊಟ್ಟೆ ಎಸೆಯಲು ಯಾರು ಹೇಳಿದರು, ಮತ್ತು ಪುಣ್ಯೇಶ್ ಜೊತೆಗಿದ್ದವರು ಯಾರು ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದೊಂದು ಪೂರ್ವ ನಿಯೋಜಿತ ಕೃತ್ಯ ಅಥವಾ ಷಡ್ಯಂತ್ರವೇ ಎಂಬ ಆಯಾಮದಲ್ಲೂ ತನಿಖೆ ಮುಂದುವರಿದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More