ಬಿಜೆಪಿ ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಬೆಂಗಳೂರಿನ ಕೆಪಿಸಿಸಿ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾಗ, ಬಿಜೆಪಿ ಶಾಸಕ ಬಿ.ಪಿ.ಹರೀಶ್ ಅವರ ಮೇಲೆ ಮೊಟ್ಟೆ ಎಸೆಯಲಾಯಿತು. ನೀಟ್ ಪರೀಕ್ಷೆ ವಿರೋಧಿ ಪ್ರತಿಭಟನೆಗಳು ತೀವ್ರಗೊಂಡಿದ್ದು, ಕಾಂಗ್ರೆಸ್ ಕಾರ್ಯಕರ್ತರು ಬಿ.ಪಿ.ಹರೀಶ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿ ವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ನ್ಯಾಯಕ್ಕಾಗಿ ಆಗ್ರಹಿಸಲಾಯಿತು.
ಬೆಂಗಳೂರು ಜು. 22: ಬೆಂಗಳೂರಿನ ಕಂಟೋನ್ಮೆಂಟ್ ಹಾಗೂ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ರಾಜ್ಯ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರ ಪ್ರತಿಭಟನೆ ವೇಳೆ ತೀವ್ರ ಹೈಡ್ರಾಮಾ ನಡೆದಿದೆ. ಕಚೇರಿ ಮುಂದೆ ಬಂದ ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು, ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ವಿರುದ್ಧ ಕರಪತ್ರ ಹಾಗೂ ಮುತ್ತಿಗೆ ಚಳವಳಿಗೆ ನಿರ್ಧರಿಸಿದ್ದ ಬಿಜೆಪಿ ನಾಯಕರನ್ನು ಪೊಲೀಸರು ಕಂಟೋನ್ಮೆಂಟ್ ಪ್ರದೇಶದ ಬಳಿಯೇ ತಡೆದು ವಶಕ್ಕೆ ಪಡೆದಿದ್ದರು. ಆದರೆ, ಈ ಪ್ರತಿಭಟನಾ ಸ್ಥಳದ ಸರಿಯಾದ ಮಾಹಿತಿ ಇಲ್ಲದೆ, ಶಾಸಕ ಬಿ.ಪಿ. ಹರೀಶ್ ಅವರು ನೇರವಾಗಿ ಕೆಪಿಸಿಸಿ ಕಚೇರಿಯ ಮುಂಭಾಗಕ್ಕೇ ಆಗಮಿಸಿದ್ದರು. ಶಾಸಕರು ಕಾರಿನಿಂದ ಇಳಿಯುತ್ತಿದ್ದಂತೆ ಕಚೇರಿಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಅವರ ವಿರುದ್ಧ ಬೃಹತ್ ಪ್ರಮಾಣದಲ್ಲಿ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಬಿಜೆಪಿ ಶಾಸಕ ಕೆಪಿಸಿಸಿ ಕಚೇರಿಯಂಗಳಕ್ಕೆ ಬರುತ್ತಿದ್ದಂತೆಯೇ ಕೃತ್ಯಕ್ಕಿಳಿದ ಕಾಂಗ್ರೆಸ್ ಕಾರ್ಯಕರ್ತರು, ಬಿ.ಪಿ. ಹರೀಶ್ ಅವರತ್ತ ಮೊಟ್ಟೆ ಎಸೆದಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ತಕ್ಷಣವೇ ಸ್ಥಳದಲ್ಲಿದ್ದ ಪೊಲೀಸರು ಕಾರ್ಯಾಚರಣೆಗೆ ಇಳಿದು, ಶಾಸಕರನ್ನು ರಕ್ಷಿಸಿ ಪಕ್ಕದ ಗಲ್ಲಿಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ತಮ್ಮ ಪೊಲೀಸ್ ಜೀಪ್‌ನಲ್ಲೇ ಹರೀಶ್ ಅವರನ್ನು ಸುರಕ್ಷಿತವಾಗಿ ಬೇರೆಡೆಗೆ ರವಾನಿಸಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು

