ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಸೋಶಿಯಲ್ ಮೀಡಿಯಾಗಳಲ್ಲೀಗ ಇದೇ ಚರ್ಚೆ!
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ AOZ (ನೈಟ್ರೋಫ್ಯುರಾನ್) ಅಂಶ ಪತ್ತೆಯಾಗಿದೆ ಎಂಬ ಸಾಮಾಜಿಕ ಜಾಲತಾಣದ ಚರ್ಚೆ ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯಾದ್ಯಂತ ಮೊಟ್ಟೆಗಳ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸುವುದಾಗಿ ತಿಳಿಸಿದ್ದು, ಸತ್ಯಾಂಶ ಹೊರಬಂದ ನಂತರ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಬೆಂಗಳೂರು, ಡಿಸೆಂಬರ್ 14: ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಇರಬಹುದೆಂಬ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ. ಕೆಲವರು ಜನಪ್ರಿಯ ಬ್ರ್ಯಾಂಡ್‌ಗಳ ಮೊಟ್ಟೆಗಳಲ್ಲಿ AOZ (ನೈಟ್ರೋಫ್ಯುರಾನ್) ಎಂಬ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ಹೇಳಿಕೊಂಡಿದ್ದಾರೆ. ಈ ವಿಷಯವು ಮೊಟ್ಟೆ ಸೇವಿಸುವವರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈ ಹಿಂದೆ ನಡೆಸಿದ ಪರೀಕ್ಷೆಗಳಲ್ಲಿ ಹಾನಿಕಾರಕ ಅಂಶಗಳು ಕಂಡುಬಂದಿಲ್ಲ. ಆದಾಗ್ಯೂ, ಈ ಹೊಸ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಲ್ಯಾಬ್‌ಗಳಲ್ಲಿ ಕೂಲಂಕುಷ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಒಂದು ವೇಳೆ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ, ಮೊಟ್ಟೆ ಉತ್ಪಾದಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

